ನಾಪೋಕ್ಲು ಮಾ.14 : ಮಾರುಕಟ್ಟೆ ಆವರಣದಲ್ಲಿ ಸಂತೆಯ ದಿನವಾದ ಸೋಮವಾರ ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸಲಾಯಿತು.
18 ವರ್ಷ ಮೇಲ್ಪಟ್ಟ ಯುವಕ, ಯುವತಿಯರು ಮತದಾನದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಿ ಯೋಗ್ಯ ಜನಪ್ರತಿಧಿಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳು ಕೋರಿದರು.
ಈ ಸಂದರ್ಭ ವಿದ್ಯುನ್ಮಾನ ಯಂತ್ರಗಳನ್ನು ಬಳಸಿ ಮತ ಚಲಾಯಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ನಾಪೋಕ್ಲು ಸೆಕ್ಟರ್ ಅಧಿಕಾರಿ ಪ್ರಮೋದ್ ಹಾಗೂ ಮುರುಗೇಶ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಕಂದಾಯ ಪರಿವೀಕ್ಷಕ, ರವಿಕುಮಾರ್, ಗ್ರಾಮ ಸೇವಕರಾದ ಪ್ರಸಾದ್ ಹಾಗೂ ಲಾಲು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.