ಮಡಿಕೇರಿ ಮಾ.14 : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ವನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. e-ಏಙಅ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.
ರೈತರು http://pmkisan.gov.in ಪೋರ್ಟಲ್ ನ Farmers Corner ನ e-KYC ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ OTP ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ OTP ಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ “SUBMIT FOR AUTH”ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವೈಸಿ is “successfully submitted” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ e-KYC ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. “e-KYC already done” ಎಂಬ ಮಾಹಿತಿ ಗೋಚರಿಸುತ್ತದೆ).
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ e-KYC ಗಾಗಿ ಕಳುಹಿಸಿದ OTP ಸ್ವೀಕೃತವಾಗುವುದಿಲ್ಲವೋ ಅವರು CSC (Citizen service centres)-ನಾಗರಿಕ ಸೇವಾ ಕೇಂದ್ರಗಳಿಗೆ) ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ e-ಏಙಅ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ e-KYC ಮಾಡಬಹುದಾಗಿದೆ.
ವಿಶೇಷ ಸೂಚನೆ: ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಮಾರ್ಚ್ 21 ರೊಳಗೆ e-KYC ಮಾಡಿಸುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರ / ಗ್ರಾಮ ಮಟ್ಟದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಖ್ ಅವರು ತಿಳಿಸಿದ್ದಾರೆ.
Breaking News
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*