ಮಡಿಕೇರಿ ಮಾ.14 : ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 35 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಮೆರಿಟ್ ಹಾಗೂ ವರ್ಗವಾರು ಮೀಸಲಾತಿ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಿ, ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲಕ ದಾಖಲಾತಿಗಳನ್ನು ವಿವಿಧ ದಿನಾಂಕಗಳಂದು ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ಅಂತಿಮ ಆಯ್ಕೆ ಪಟ್ಟಿಯಂತೆ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಮತ್ತು ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಕೆಲವು ಅಭ್ಯರ್ಥಿಗಳು ಗೈರುಹಾಜರಾದ ಕಾರಣ ಹೆಚ್ಚುವರಿ ಆಯ್ಕೆಪಟ್ಟಿಯ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪಡೆದು ಸಂಬಂಧಪಟ್ಟ ಪ್ರಾಧಿಕಾರದಿಂದ ನೈಜತೆಯ ಬಗ್ಗೆ ದೃಢೀಕರಣ ಪಡೆಯಲಾಗಿದೆ.
ಆದ್ದರಿಂದ ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳ ಪೈಕಿ ಮೂಲ ದಾಖಲೆಗಳನ್ನು ಹಾಜರುಪಡಿಸಿದ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಪಟ್ಟಿ ಆಧಾರದಲ್ಲಿ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗೆ http://www.kodagu.nic.in ನ್ನು ವೀಕ್ಷಿಸಬಹುದು ಎಂದು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*