ಮಡಿಕೇರಿ ಮಾ.14 : ಇತ್ತೀಚೆಗೆ ಗೋಣಿಕೊಪ್ಪಲಿನಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಘಟಕ ದೂರು ನೀಡಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈಶ್ವರಪ್ಪ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಒಂದು ಸಮುದಾಯದ ಧಾರ್ಮಿಕ ಆಚರಣೆ ಕುರಿತು ಅವಹೇಳನಕಾರಿ ಭಾಷಣ ಮಾಡುವ ಮೂಲಕ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.
ಮತ್ತೊಂದೆಡೆ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭ ಬಿಜೆಪಿ ಕಟೌಟ್ ಗಳನ್ನು ಅಳವಡಿವಾಗ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಪ್ರಕರಣದ ಬಗ್ಗೆಯೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*