ಸುಂಟಿಕೊಪ್ಪ,ಮಾ.14 : ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುಡುಗು, ಮಿಂಚು, ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಮಂಗಳವಾರ ಸಂಜೆ ಸುಂಟಿಕೊಪ್ಪ, ನಾಕೂರು, ಪನ್ಯ, ಹರದೂರು, ಗರಗಂದೂರು ಸೇರಿದಂತೆ ವಿವಿಧ ಭಾಗಗಳಲ್ಲಿ 2 ಇಂಚಿನಷ್ಟು ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿದೆ. ಗುಡುಗು ಸಿಡಿಲಿನ ಅಬ್ಬರ ಬೆಚ್ಚಿ ಬೀಳಿಸಿದೆ.










