ಮಡಿಕೇರಿ ಮಾ.14 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ನಾಪೋಕ್ಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರ್ಧ ಇಂಚಿನಷ್ಟು ಮಳೆ ಸುರಿದಿದೆ.
ಮರಗೋಡು, ಮದೆನಾಡು, ಬೆಟ್ಟಗೇರಿ, ಗಾಳಿಬೀಡು, ಭಾಗಮಂಡಲ ಮತ್ತಿತರೆಡೆ ಸಾಧಾರಣ ಮಳೆಯಾಗಿದೆ. ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಸುತ್ತಮುತ್ತ ತುಂತುರು ಮಳೆ ಮಳೆಯಾಗಿದ್ದು, ವಿರಾಜಪೇಟೆಯಲ್ಲಿ ಮೋಡ ಕವಿದ ವಾತಾವರಣವಿತ್ತು.
ಉತ್ತಮ ಮಳೆಯಾಗಿದ್ದರೆ ಬೆಂಕಿಯಿoದ ನಾಶವಾಗಿರುವ ಅರಣ್ಯ ಭಾಗಕ್ಕೆ ಸಹಕಾರಿಯಾಗುತ್ತಿತ್ತು. ಆದರೆ ನಿರೀಕ್ಷೆಯಷ್ಟು ಮಳೆಯಾಗದೆ ನಿರಾಶೆ ಮೂಡಿಸಿದೆ.
ನಾಪೋಕ್ಲು ವಿಭಾಗದಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಿರುವುದರಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಬೀರಿದೆ. ಕಾಫಿ ಮತ್ತು ಕರಿಮೆಣಸು ಕೊಯ್ಲು ಕಾರ್ಯ ಮುಗಿಸಿದ್ದು, ಪ್ರಸ್ತುತ ಉತ್ತಮ ಮಳೆಯಾದರೆ ಮುಂದಿನ ವರ್ಷ ಉತ್ತಮ ಫಸಲನ್ನು ಪಡೆಯಲು ಸಾಧ್ಯವಾಗುತ್ತದೆ. ಮಳೆಯಾಗದಿದ್ದರೆ ಸ್ಪಿಂಕ್ಲರ್ ಮೊರೆ ಹೋಗಬೇಕಾಗುತ್ತದೆ, ಇದರಿಂದ ಬೆಳೆಗಾರರು ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಕಾಫಿ ತೋಟಗಳೇ ಇರುವ ಪ್ರದೇಶ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ.
ಬಿಸಿಲಿನ ತಾಪಕ್ಕೆ ಕಾಡ್ಗಿಚ್ಚು ಏರ್ಪಟ್ಟು ಅರಣ್ಯ ಬೆಂಕಿಗಾಹುತಿಯಾಗುತ್ತಿದೆ. ಕಾಡಿನಲ್ಲಿ ನೀರಿನ ಕೊರತೆ ಉಂಟಾಗಿ ವನ್ಯಮೃಗಗಳು ಗ್ರಾಮೀಣ ಭಾಗದ ಕೆರೆಗಳನ್ನು ಹುಡುಕಿಕೊಂಡು ಬರುತ್ತಿವೆ. ಕಾವೇರಿ ನದಿಯಲ್ಲೂ ನೀರಿನ ಮಟ್ಟ ಕುಸಿದಿದೆ. ಈ ವೇಳೆಯಲ್ಲಿ ಮಳೆಯಾದರೆ ಉತ್ತಮ ಎನ್ನುವುದು ಕೃಷಿಕ ವರ್ಗದ ಅಭಿಪ್ರಾಯವಾಗಿದೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*