ಸೋಮವಾರಪೇಟೆ ಮಾ.14 : ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಗಣಸಿ ಎಂಬಲ್ಲಿ ನಡೆದಿದೆ. ಸೋಮವಾರಪೇಟೆಯ ಬೆಟ್ಟದಕೊಪ್ಪ ಗ್ರಾಮದ ಕೃಷಿಕ ರಮೇಶ್ ಎಂಬುವವರ ಪುತ್ರ ಮನೋಹರ್(33) ಮೃತಪಟ್ಟವರು.
ಮನೋಹರ್ ತಿಪಟೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದು, ಕೊಬ್ಬರಿ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ತನ್ನೂರಿನಿಂದ ತಿಪಟೂರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭ ರಾತ್ರಿ ಅಪಘಾತ ಸಂಭವಿಸಿದೆ. ತಲೆ ಮತ್ತು ಎದೆ ಭಾಗಕ್ಕೆ ತೀವ್ರ ಗಾಯಗೊಂಡು ಮೃತಪಟ್ಟರು. ಮೃತರು ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿಯನ್ನು ಅಗಲಿದ್ದಾರೆ.










