ಮಡಿಕೇರಿ ಮಾ.15 : ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117ನೇ ಜನ್ಮದಿನಾಚರಣೆಯ ಪ್ರಯುಕ್ತ ಮಾ.31 ರಂದು ಜ. ಕೆ.ಎಸ್.ತಿಮ್ಮಯ್ಯ ಅವರ ಪುತ್ಥಳಿ ಹಾಗೂ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ವಹಿಸಲಿದ್ದಾರೆ.
ಇದೇ ಸಂದರ್ಭ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.








