ಮಡಿಕೇರಿ ಮಾ.15 : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಮಾ.22 ರಂದು ಯುಗಾದಿ ಹಬ್ಬಾಚರಣೆ ಹಾಗೂ ಏ.10 ರಂದು ದೇವಾಲಯದ ವಾರ್ಷಿಕ ಉತ್ಸವ ನಡೆಯಲಿದೆ.
ಮಾ.22 ರಂದು ಯುಗಾದಿ ಹಬ್ಬಾಚರಣೆ ಪ್ರಯುಕ್ತ ಬೆಳಿಗ್ಗೆ 7 ಗಂಟೆಯಿಂದ ವಿಶೇಷ ಪೂಜೆ, ಪಂಚಾಂಗ ಶ್ರವಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆರವೇರಲಿದೆ.
ವಾರ್ಷಿಕ ಉತ್ಸವದ ಪ್ರಯುಕ್ತ ಏ.10 ರಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, 1 ಗಂಟೆಗೆ ತಕ್ಕಾರ ಮನೆಯಿಂದ ಬಂಡಾತ ತರುವುದು, 1.30 ಗಂಟೆಗೆ ಹಬ್ಬಾಚರಣೆ ನಂತರ ಅನ್ನಸಂತರ್ಪಣೆ ನೆರವೇರಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಟ್ರಸ್ಟ್ ನ ಅಧ್ಯಕ್ಷರು, ಸದಸ್ಯರು ಮನವಿ ಮಾಡಿದ್ದಾರೆ.










