ವಿರಾಜಪೇಟೆ ಮಾ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಭಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಆಲಿ ಹೇಳಿದರು.
ಜೆಡಿಎಸ್ ಪಕ್ಷದ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ಹಮ್ಮಿಕೊಂಡಿದ್ದ “ಮುಂದಿನ ಚುನಾವಣಾ ಪೂರ್ವಭಾವಿ ಸಭೆ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮತದಾರರು ಜೆಡಿಎಸ್ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಸಂದರ್ಭ ಪಕ್ಷದ ಏಳಿಗೆಗೆ ಕೆಲಸಮಾಡುವ ಮೂಲಕ 2023ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮ ವಹಿಸಬೇಕು ಎಂದರು.
ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಮಡಿಕೇರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವು ಖಚಿತ, ವಿರಾಜಪೇಟೆ ಕ್ಷೇತದಲ್ಲ್ರಿ ತ್ರಿಕೋನ ಸ್ಪರ್ದೇ ನಡೆಯಲಿದೆ. ಈ ಹಿಂದೆ ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು. ಹಾಗೂ ಅವರ ಜನಪರ ಯೊಜನೆಗಳನ್ನು ಈಗಾಗಲೇ ಜನರ ಮನೆ ಬಾಗಿಲಿಗೆ ಕರಪತ್ರ ಹಂಚಲಾಗುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
ವಿರಾಜಪೇಟೆ ವಿಧಾನ ಸಭಾಕ್ಷೇತ್ರದ ಜೆಡಿಎಸ್ ಪಕ್ಷದ ಅಧ್ಯಕ್ಷ ಪಿ.ಎ.ಮಂಜುನಾಥ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ 160ಕ್ಕೂ ಹೆಚ್ಚು ಬೂತ್ ಸಮಿತಿಗಳನ್ನು ರಚಿಸಲಾಗಿದ್ದು, 24 ಘಟಕಗಳ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ವೈಮನಸ್ಸು ದೂರಮಾಡಿ ಪಕ್ಷದ ಏಳಿಗೆಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಗ್ರಾಮಗಳು ಅಭಿವೃದ್ಧಿ ಹೊಂದಲು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯಿಂದ ಮಾತ್ರ ಸಾದ್ಯ. ಆದ್ದರಿಂದ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತಾಗಬೇಕು ಎಂದರು.
ಯುವ ಘಟಕದ ಜಿಲ್ಲಾ ಅಧ್ಯಕ್ಷ ಸಿ.ಎಲ್.ವಿಶ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗಿನಲ್ಲಿ ಪ್ರಕೃತಿ ವಿಕೊಪದ ಸಂದರ್ಭ ಮನೆ ಆಸ್ತಿ ಕಳೆದುಕೊಂಡ ನಿರಾಶ್ರಿತರಿಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ವಸತಿ ಯೋಜನೆ ಕಲ್ಪಿಸಿಕೊಟ್ಟರು ಅವರ ಅವಧಿಯಲ್ಲಿ ರೈತರ ಸಾಲ ಮನ್ನಾ, ಲಾಟರಿ ನಿಷೇಧ ಮಾಡಿ ಬಡ ಜನರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನೆ ಅಧಿಕಾರಕ್ಕೆ ತರುವಂತಾಗಬೇಕು ಎಂದರು.
ಜೆಡಿಎಸ್ ಪಕ್ಷದ ಪೂರ್ವಭಾವಿಸಭೆಯಲ್ಲಿ ಪಕ್ಷದ ಜಿಲ್ಲಾ ಮಹಿಳಾ ಘಟಕದ ಪುಷ್ಪಾವತಿ ರಮೇಶ್, ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಕೊಂಡಗೇರಿ ಮತ್ತು ಪಾಣತ್ತಲೇ ವಿಶ್ವನಾಥ್, ಜಯಮ್ಮ ಅಮ್ಮತ್ತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ತಾಲೂಕು ಪ್ರಧಾನ ಕಾರ್ಯದಶಿ ಟಿ.ಆರ್.ಹರ್ಷ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಜುಬೈದ ನಬುವತ್, ರಾಜೇಶ್ ಹೊಲಮಾಳ, ನೂರ್ ಅಹಮದ್, ಸೈಪುದ್ಧಿನ್, ಕುಯ್ಯಂಡ ರಾಕೇಶ್, ಮಜೀದ್ ಚೋಕಂಡಳ್ಳಿ ಸೇರಿದಂತೆ ತಾಲೂಕಿನ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.