ಮಡಿಕೇರಿ ಮಾ.15 : ಎಂ.ಡಿ.ಎಂ.ಎ ಎಂಬ ಹೆಸರಿನ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ನಿವಾಸಿ ಎಂ.ಹೆಚ್.ಸಯ್ಯದ್ ಹುಸೇನ್(27) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ 3.06 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆಗೆ ಸಾರ್ವಜನಿಕರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಸೈಬರ್ ಕ್ರೈಂ (ಸೆನ್) ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜೆ.ಕೆ.ರಾಘವೇಂದ್ರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಈ ತಂಡಕ್ಕೆ ಲಭಿಸಿತ್ತು. ಅದರಂತೆ ದಾಳಿ ನಡೆಸಿ ಪರಿಶೀಲಿಸಿದಾಗ ಆರೋಪಿ ಬಳಿ ಮಾದಕ ವಸ್ತು ಪತ್ತೆಯಾಗಿದೆ. ಸ್ಥಳದಲ್ಲೇ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*