ಬೆಂಗಳೂರು ಮಾ.16 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಮಾ.17 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ.
ಕ್ಯೂಆರ್ ಕೋಡ್ ಆಧಾರಿತ ರಿಫ್ಲೆಕ್ಟರ್ ಟೇಪುಗಳನ್ನು ಅಳವಡಿಸಿಕೊಳ್ಳಬೇಕೆನ್ನುವ ನಿಯಮ ರದ್ದುಪಡಿಸಬೇಕು. ಬೆಂಗಳೂರು- ಮೈಸೂರು ರಸ್ತೆಯಲ್ಲಿ ದ್ವಿಚಕ್ರ ಮತ್ತು ಮಂದಗತಿಯಲ್ಲಿ ಚಲಿಸುವ ಟ್ರಾಕ್ಟರ್ ಆಟೋರಿಕ್ಷಾಗಳ ಓಡಾಟ ನಿಷೇಧಿಸಬೇಕು, ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕವನ್ನು ತೆಗೆದುಹಾಕಬೇಕು, ನಗರದ ಒಳಗೆ ಅವೈಜ್ಞಾನಿಕ ರೂಪದ ವಾಹನಗಳ ಸಂಚಾರವನ್ನು ನಿಷೇಧಿಸಿರುವ ನಿಯಮವನ್ನ ವಾಪಸ್ಸು ಪಡೆಯಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ವಾಣಿಜ್ಯ ವಾಹನಗಳ ಎಫ್.ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಇರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ.
ಹೂವು, ಹಣ್ಣು, ಹಾಲು ತರಕಾರಿಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಪೂರೈಕೆ ಮಾಡುವ ಸರಕು ಸಾಗಣೆ ವಾಹನಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿವೆ.
Breaking News
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*