ಸೋಮವಾರಪೇಟೆ ಮಾ.16 : ಕಾಂಗ್ರೆಸ್ ಸೋಮವಾರಪೇಟೆ ನಗರ ಘಟಕದ ವತಿಯಿಂದ ಪಕ್ಷದ ಗೃಹಲಕ್ಷ್ಮೀ ಯೋಜನೆಯ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು.
ಪಟ್ಟಣದ ವಿವಿಧ ವಾರ್ಡ್‍ಗಳ ಮನೆ ಮನೆಗಳಿಗೆ ತೆರಳಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳ ಬಗ್ಗೆ ತಿಳಿಸಿದರು. ಬಿಜೆಪಿ ದುರಾಳಿತದಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಾಮಾನ್ಯ ಜನರು ಜೀವನ ಸಾಗಿಸುವುದ್ಕಕೆ ಪರದಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ತೆರಿಗೆ ಕಟ್ಟಿ ಸುಸ್ತಾಗಿದ್ದಾರೆ. ಕಾಂಗ್ರೆಸ್‍ನಿಂದ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ. ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಜನರರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ, ಗೃಹಲಕ್ಷ್ಮೀ ಯೋಜನೆಯ ಮೂಲಕ ಕುಟುಂಬದ ಮಹಿಳೆಗೆ ತಿಂಗಳಿಗೆ ಎರಡು ಸಾವಿರ ಹಣವನ್ನು ನೀಡಲಾಗುವುದು ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ನಾಗರಾಜು, ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಈ.ಜಯೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ, ಪ್ರಮುಖರಾದ ಬಿ.ಜಿ. ಇಂದ್ರೇಶ್, ಎಚ್.ಸಿ. ನಾಗೇಶ್, ಕೆ.ಎ.ಆದಂ, ಎಚ್.ಪಿ.ರಾಜಪ್ಪ, ಸಂದ್ಯಾ ಪ್ರಕಾಶ್, ಮಹಮ್ಮದ್ ಶಾಫಿ, ಗೌರಮ್ಮ ಗುರುಲಿಂಗಪ್ಪ ಸೇರಿದಂತೆ ಇತರ ಕಾರ್ಯಕರ್ತರು ಹಾಜರಿದ್ದರು.









