ಮಡಿಕೇರಿ ಮಾ.16 : ವಿಜಯ ಸಂಕಲ್ಪ ಯಾತ್ರೆಯ ಪ್ರಚಾರದ ಸಂದರ್ಭ ಗೋಣಿಕೊಪ್ಪಲಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ್ರವನ್ನು ‘ಡಾ.ಅಂಬೇಡ್ಕರ್’ ಅವರ ಭಾವಚಿತ್ರದ ಮೇಲೆ ಅಂಟಿಸಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ, ಈ ಬಗ್ಗೆ ಬಿಜೆಪಿ ಪ್ರಮುಖರು ಬಹಿರಂಗ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ದಸಂಸ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಮಾತನಾಡಿ, ರಾಷ್ಟ್ರಕ್ಕೆ ಸಂವಿಧಾನವನ್ನು ಕೊಟ್ಟ ಮಹಾಪುರುಷ ಅಂಬೇಡ್ಕರ್ ಅವರ ಭಾವಚಿತ್ರದ ಮೇಲೆ ಬೊಮ್ಮಾಯಿ ಅವರ ಭಾವಚಿತ್ರವನ್ನು ದುರುದ್ದೇಶಪೂರ್ವಕವಾಗಿಯೇ ಅಳವಡಿಸಲಾಗಿದೆ ಎಂದು ಆರೋಪಿಸಿದರು.
ನಡೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಇಲ್ಲವೆ ಜಿಲ್ಲೆಯ ಜನಪ್ರತಿನಿಧಿಗಳು ಬಹಿರಂಗ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರಚಾರ ನಡೆಸುವ ಮೂಲಕ, ಆ ಪಕ್ಷವನ್ನು ಸೋಲಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.
ಕರ್ನಾಟಕ ದಸಂಸ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಅಂಬೇಡ್ಕರ್ ಭವನದ ಉದ್ಘಾಟನೆಯನ್ನು ಸೇರಿಸಲಾಗಿದೆ. ಆದರೆ, ಭವನದ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ತರಾತುರಿಯಲ್ಲಿ ಕಟ್ಟಡವನ್ನು ಉದ್ಘಾಟಿಸುತ್ತಿರುವುದು ಖಂಡನೀಯವೆಂದರು.
ದಸಂಸ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ, ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ದಲಿತ ಸಮೂಹಕ್ಕೆ ಪ್ರಾಧಾನ್ಯತೆಯನ್ನು ನೀಡುತ್ತಿಲ್ಲ. ಈ ಹಿಂದಿನ ಕಾಂಗ್ರೆಸ್, ಜೆಡಿಎಸ್ ಅಧಿಕಾರದ ಅವಧಿಯಲ್ಲಿ ದಲಿತರಿಗೆ ಸಚಿವ ಸ್ಥಾನ ನೀಡಲಾಗಿತ್ತು, ಆದರೆ, ಬಿಜೆಪಿ ಸರ್ಕಾರದಲ್ಲಿ ಅಂತಹ ಅವಕಾಶ ನೀಡಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷದ ಗೆಲುವಿಗೆ ದಲಿತ ಸಮೂಹವೇ ನಿರ್ಣಾಯಕವೆಂದು ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಕೆ. ಗಣೇಶ್, ನಗರ ಸಂಚಾಲಕ ಸಿ.ಪಿ.ಸಿದ್ದೇಶ್ ಹಾಗೂ ಚೇರಂಬಾಣೆ ಗ್ರಾಮ ಸಮಿತಿ ಅಧ್ಯಕ್ಷ ಮನೋಜ್ ಕುಮಾರ್ ಉಪಸ್ಥಿತರಿದ್ದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*