ಮಡಿಕೇರಿ ಮಾ.16 : ನಗರದ ಸಾಯಿ ಸಂಸ್ಥೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಮಾರ್ಚ್, 22 ರಂದು ಬೆಳಗ್ಗೆ 10 ಗಂಟೆಗೆ ಹಾಕಿ ಟರ್ಪ್ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ.
ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಚಾಲನೆ ನೀಡಲಿದ್ದಾರೆ. ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಡಿಕೇರಿ ಸಾಯಿ ಕೇಂದ್ರದ ಮಿನಿ ಉನ್ನಿರಾಜ್ ಅವರು ತಿಳಿಸಿದ್ದಾರೆ.









