ಮಡಿಕೇರಿ ಮಾ.16 : ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆ ಮಾರ್ಚ್, 18 ರಂದು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ಕೆಎಸ್‌ಆರ್‌ಟಿಸಿ ನಿಗಮದ ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಸಾರ್ವಜನಿಕರು/ ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಅವರು ಕೋರಿದ್ದಾರೆ.









