ಕುಶಾಲನಗರ ಮಾ.16 : ದಲಿತ ಯುವತಿಯ ಅನುಮಾನಾಸ್ಪದ ಸಾವಿಗೆ ಸಂಬoದಿಸಿದoತೆ ಯುವತಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಯುವತಿಯ ಕುಟುಂಬಸ್ಥರು ಹಾಗೂ ದಲಿತ ಸಂಘಟನೆಗಳ ಪ್ರಮುಖರು ಯುವಕನ ಮನೆ ಮುಂಭಾಗ ಯುವತಿಯ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು.
ಅಂತರ್ಜಾತಿ ವಿವಾಹವಾಗಿದ್ದ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಅಕ್ಷಿತಾ ಎಂಬಾಕೆ ಪತಿಯ ಮನೆ ಸೇರಿದ ನಾಲ್ಕೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಳು. ಕೊಲೆ ಎಂದು ಆರೋಪಿಸಿ, ಯುವತಿಯ ಕುಟುಂಬಸ್ಥರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆ ವಿವಾಹವಾದ ಯುವಕ ಹೇಮಂತ್ ಹಾಗೂ ಆತನ ತಂದೆ, ತಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೇಮಂತ್ ಕ್ರಿಮಿನಾಶಕ ಸೇವಿಸಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.
ಈ ನಡುವೆ ಇಂದು ಈತನ ತಾಯಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತಂದೆಯನ್ನು ಇಲ್ಲಿಯವರೆಗೆ ಬಂಧಿಸಿಲ್ಲವೆoದು ಅಸಮಾಧಾನ ವ್ಯಕ್ತಪಡಿಸಿದ ಅಕ್ಷಿತಾ ಕುಟುಂಬಸ್ಥರು, ಯುವಕನ ಮನೆ ಮುಂದೆ ಮೃತ ಶರೀರವನ್ನು ಇಟ್ಟು ಪ್ರತಿಭಟನೆ ನಡೆಸಿದರು. ದಲಿತ ಸಂಘಟನೆಗಳ ಪ್ರಮುಖರು ಇವರ ಬೆಂಬಲಕ್ಕೆ ನಿಂತರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಕುಶಾಲನಗರ ಪೊಲೀಸ್ ಉಪ ಅಧೀಕ್ಷಕ ಗಂಗಾಧರಪ್ಪ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಶೇಖರ್ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು.
ಆದರೆ ಯುವತಿಯ ಶವವನ್ನು ಹೇಮಂತ್ ಗೆ ಸೇರಿದ ಜಾಗದಲ್ಲಿ ಸಂಸ್ಕಾರ ಮಾಡುವ ಮೂಲಕ ಕುಟುಂಬಸ್ಥರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ತಕ್ಷಣ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ದಲಿತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು ನಂತರ ಪ್ರತಿಭಟನೆಯಿಂದ ಹಿಂದೆ ಸರಿದರು.
ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*