ಮಡಿಕೇರಿ ಮಾ.16 : ರಸ್ತೆ ದುರಸ್ತಿಗೆಂದು ಸಾಲು ಸಾಲು ಭೂಮಿಪೂಜೆ ನೆರವೇರಿಸುವ ಮೂಲಕ ಜನರ ಕಣ್ಣಿಗೆ ಮಣ್ಣೆರೆಚುವ ಕಾರ್ಯವನ್ನು ನಗರಸಭೆ ಮಾಡುತ್ತಿದೆ ಎಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಎಲ್ಲಾ ವಾರ್ಡ್ಗಳ ರಸ್ತೆಗಳನ್ನು ತಕ್ಷಣ ದುರಸ್ತಿ ಪಡಿಸದಿದ್ದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಹೊಂಡಗುoಡಿಗಳಾಗಿವೆ, ವಾಹನಗಳು ಮಾತ್ರವಲ್ಲದೆ ಪಾದಾಚಾರಿಗಳ ಸಂಚಾರಕ್ಕೂ ಅಡಚಣೆಯಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆ ಗುಂಡಿ ತಪ್ಪಿಸುವ ಸಂದರ್ಭ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿದೆ. ಚುನಾವಣೆ ಸಮೀಪಿಸಿತು ಎನ್ನುವ ಕಾರಣಕ್ಕೆ ಕೇವಲ ಭೂಮಿಪೂಜೆಗೆ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತಿರುವ ಜನಪ್ರತಿನಿಧಿಗಳು ಗುದ್ದಲಿಗೆ ಬೆಲೆ ಇಲ್ಲದಂತೆ ಮಾಡಿದ್ದಾರೆ.
ರಸ್ತೆಗಳ ಮರು ಡಾಂಬರೀಕರಣಕ್ಕೆ ಕೋಟಿ ಕೋಟಿ ಹಣ ಬಂದಿದೆ ಎಂದು ಹೇಳಿಕೆಗಳನಷ್ಟೇ ನೀಡುತ್ತಿದ್ದಾರೆ. ಆದರೆ ಮರು ಡಾಂಬರೀಕರಣ ಕಾರ್ಯ ಮಾಡದೆ ತೇಪೆ ಹಾಕಲಾಗುತ್ತಿದೆ. ಕಾಂಕ್ರೀಟ್ ರಸ್ತೆಗಳಿಗೂ ಡಾಂಬರಿನ ತೇಪೆ ಹಾಕುವ ಮೂಲಕ ತನ್ನ ಅಭಿವೃದ್ಧಿಯ ವೇಗವನ್ನು ನಗರಸಭೆ ಜನರಿಗೆ ಪ್ರದರ್ಶಿಸುತ್ತಿದೆ ಎಂದು ಟೀಕಿಸಿದ್ದಾರೆ.
ನಗರಸಭೆಯಲ್ಲಿ ರಸ್ತೆಗಳ ದುರಸ್ತಿಗೆ ಹಣ ಲಭ್ಯತೆ ಇದೆಯೇ ಅಥವಾ ಇಲ್ಲವೇ ಎನ್ನುವುದನ್ನು ಜನರಿಗೆ ಬಹಿರಂಗವಾಗಿ ಹೇಳಬೇಕು. ಭೂಮಿಪೂಜೆ ಮಾಡಿ ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡಬಾರದು. ಇನ್ನೆರಡು ತಿಂಗಳಿನಲ್ಲಿ ಮಳೆಗಾಲವೂ ಆರಂಭವಾಗುತ್ತದೆ. ಕೆಲವೇ ದಿನಗಳಲ್ಲಿ ಚುನಾವಣೆಯೂ ಘೋಷಣೆಯಾಗುತ್ತದೆ. ನೀತಿ ಸಂಹಿತೆಯ ನೆಪವೊಡ್ಡಿ ಅಭಿವೃದ್ಧಿ ಕಾರ್ಯಗಳಿಗೆ ಎಳ್ಳುನೀರು ಬಿಡುವ ಸಾಧ್ಯತೆಗಳೇ ಹೆಚ್ಚಾಗಿದೆ. ನಗರದ ಹಲವು ಬಡಾವಣೆಗಳಲ್ಲಿ ಭೂಮಿಪೂಜೆ ಮಾಡಿದ ನಂತರ ಯಾರೂ ತಿರುಗಿಯೂ ನೋಡಿಲ್ಲ. ರಸ್ತೆಗಳ ಗುಂಡಿಗಳು ಹಾಗೇ ಉಳಿದುಕೊಂಡಿವೆ. ಜನರ ಹಿತ ಮರೆತಿರುವ ನಗರಸಭೆ ಇಚ್ಛಾಶಕ್ತಿಯ ಕೊರತೆಯನ್ನು ಎದುರಿಸುತ್ತಿದೆ ಎಂದು ಫ್ಯಾನ್ಸಿ ಬೆಳ್ಯಪ್ಪ ಆರೋಪಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*