ಮಡಿಕೇರಿ ಮಾ.16 : ನಗರದ ರಸ್ತೆಗಳ ದುರಸ್ತಿ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಆಸಕ್ತಿ ಇಲ್ಲವೆಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಟೀಕಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಸ್ತೆಗಳ ದುರಸ್ತಿಗೆಂದು ಭೂಮಿಪೂಜೆ ನಡೆದು ಗುದ್ದಲಿ ಸವಿಯಿತೇ ಹೊರತು ನಿರೀಕ್ಷಿತ ಮಟ್ಟದಲ್ಲಿ ಡಾಂಬರೀಕರಣ ಕಾರ್ಯ ನಡೆಯುತ್ತಿಲ್ಲ. ನಗರಸಭೆಯ 23 ವಾರ್ಡ್ ಗಳ ಸದಸ್ಯರ ಬೇಡಿಕೆಗೆ ಅನುಗುಣವಾಗಿ ಅನುದಾನ ಲಭಿಸುತ್ತಿಲ್ಲ. ನಗರದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಗುಂಡಿ ಬಿದ್ದ ರಸ್ತೆಗಳಿಂದ ಅಪಾಯ ಎದುರಾಗುತ್ತಿದೆ, ಕೆಲವು ಬಡಾವಣೆಗಳಲ್ಲಿ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಕಾಂಕ್ರೀಟ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದೆ.
ನಿರಂತರ ಭೂಮಿಪೂಜೆ ಮಾಡುವ ಮೂಲಕ ಜನರ ಕಣ್ಣೊರೆಸುವ ತಂತ್ರ ಅನುಸರಿಸಲಾಗುತ್ತಿದೆ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದ ರಸ್ತೆಗಳು ಹೀನಾಯ ಸ್ಥಿತಿಯಲ್ಲಿರುವುದರಿಂದ ಪ್ರವಾಸಿಗರು ಕೂಡ ಬೇಸರ ಪಟ್ಟುಕೊಳ್ಳುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತನಿಧಿಗಳು ರಸ್ತೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ, ಕಾಮಗಾರಿ ಯಾವ ಗುಣಮಟ್ಟದಲ್ಲಿದೆ ಎಂದು ಪರಿಶೀಲಿಸುತ್ತಿಲ್ಲ. ಜನಹಿತ ಮರೆತು ಪಕ್ಷ ಸಂಘಟನೆಯಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಕ್ಟೋಬರ್ ತಿಂಗಳಿನಲ್ಲೇ ರಸ್ತೆಗಳು ಮರು ಡಾಂಬರೀಕರಣವಾಗಬೇಕಾಗಿತ್ತು. ಆದರೆ ಇಲ್ಲಿಯವರೆಗೆ ಮೀನಾ, ಮೇಷ ಎಣಿಸಿದ ನಗರಸಭೆ ಮಳೆಗಾಲ ಸಮೀಪಿಸಿದರೂ ಎಚ್ಚೆತ್ತುಕೊಂಡಿಲ್ಲ. ಟೆಂಡರ್ ಪ್ರಕ್ರಿಯೆಗಳು ಕ್ರಮಬದ್ಧವಾಗಿ ನಡೆದಿದ್ದರೆ ಕಾಮಗಾರಿ ಆರಂಭಿಸಲು ಮತ್ತು ಆರಂಭಗೊಂಡ ಕಾಮಗಾರಿಯನ್ನು ಪೂರ್ಣಗೊಳಿಸಲು ಯಾಕೆ ವಿಳಂಬ ಎಂದು ಅವರು ಪ್ರಶ್ನಿಸಿದ್ದಾರೆ.
ನಗರದ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವು ಬಡಾವಣೆಗಳಲ್ಲಿ ಕಾರ್ಗತ್ತಲು ಆವರಿಸಿದ್ದು, ಭಯದ ವಾತಾವರಣವಿದೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದ್ವಿಚಕ್ರ ವಾಹನ ಚಾಲಕರು ಹಾಗೂ ಆಟೋಗಳ ಮೇಲೆರಗುತ್ತಿವೆ. ಹಿಂಡು ಹಿಂಡಾಗಿ ಓಡಾಡುತ್ತಿರುವ ನಾಯಿಗಳಿಂದ ಮಕ್ಕಳು ಅಪಾಯವನ್ನು ಎದುರಿಸುತ್ತಿದ್ದಾರೆ. ಹೈಟೆಕ್ ಹೆಸರಿನ ಮಾಂಸದ ಮಾರುಕಟ್ಟೆ ಅಶುಚಿತ್ವದಿಂದ ಕೂಡಿದೆ, ಸುಲಭ್ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಕಾವೇರಿ ಕಲಾಕ್ಷೇತ್ರದ ನೂತನ ಕಟ್ಟಡದ ಕಾಮಗಾರಿಯನ್ನು ಇನ್ನೂ ಕೂಡ ಆರಂಭಿಸಿಲ್ಲ. ಕೇವಲ ಪೊಳ್ಳು ಭರವಸೆಗಳಲ್ಲೇ ದಿನ ಕಳೆಯುತ್ತಿರುವ ನಗರಸಭೆ ಜನರು ನೀಡುವ ತೆರಿಗೆಗೆ ನ್ಯಾಯ ಒದಗಿಸುತ್ತಿಲ್ಲವೆಂದು ಲೀಲಾ ಶೇಷಮ್ಮ ಆರೋಪಿಸಿದ್ದಾರೆ.
ನಗರದ ಎಲ್ಲಾ ಬಡಾವಣೆಗಳ ರಸ್ತೆಗಳನ್ನು ಶೀಘ್ರ ಮರು ಡಾಂಬರೀಕರಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*