ಕುಶಾಲನಗರ ಮಾ.17 : ಕೂಡೂಮಂಗಳೂರು ಗ್ರಾ.ಪಂ ನ ನವಗ್ರಾಮದ ಅಂಗನವಾಡಿಯನ್ನು 1.6 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಕಾಮಗಾರಿಯನ್ನು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರಕ್ಕೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದ್ದು, ಆಹಾರ ಸಂಗ್ರಹಣಾ ಕೊಠಡಿಯಲ್ಲಿ ನೀರು ಸೋರುವಿಕೆಯಿಂದ ಬಹಳ ಸಮಸ್ಯೆಯಾಗುತ್ತಿತ್ತು. ಈ ಹಿನ್ನಲೆ ನವಗ್ರಾಮದ ಅಂಗನವಾಡಿ ಕೇಂದ್ರವನ್ನು 1.6 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಜಿ.ಪಂ 1.2 ಲಕ್ಷ ರೂ ಹಾಗೂ ತಾ.ಪಂ ನ 60 ಸಾವಿರ ರೂ ಗಳನ್ನು ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ವ್ಯಯಿಸಲಾಗುತ್ತಿದೆ.
ಆಹಾರ ಸಾಮಗ್ರಿಗಳ ಸಂಗ್ರಹಣಾ ಕೊಠಡಿಗೆ ಮೇಲ್ಬಾವಣಿ ಅಳವಡಿಕೆ, ಅಂಗನಾಡಿ ಕೇಂದ್ರದ ಕಾಂಪೌಂಡ್ ಗೆ ಮೆಷ್ ಅಳವಡಿಕೆ, ಇನ್ನಿತರ ದುರಸ್ತಿ ಕಾರ್ಯ ಹಾಗೂ ಬಣ್ಣ ಬಳಿಯುವ ಕೆಲಸವನ್ನು ನಡೆಸಲಾಗುತ್ತಿದೆ. ಈ ಸಂದರ್ಭ ಅಂಗನವಾಡಿ ಶಿಕ್ಷಕಿ ಕಲಾವತಿರವರು, ಅಂಗನವಾಡಿಯ ಸಣ್ಣ ಪುಟ್ಟ ಸಮಸ್ಯೆಗಳ ಬಗ್ಗೆ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರ ಗಮನಕ್ಕೆ ತಂದರು. ಮಕ್ಕಳ ಸಂಖ್ಯೆ ಕಡಿಮೆ ಇರುವಾಗ ಅಡುಗೆ ಮಾಡಲು ಸಣ್ಣ ಕುಕ್ಕರ್ ನ ಅವಶ್ಯಕತೆ ಇರುವುದಿಂದ, ತಮ್ಮ ವೈಯಕ್ತಿಕ ಹಣದಿಂದ ಕುಕ್ಕರ್ ಹಾಗೂ ಅಡುಗೆ ಮನೆಗೆ ಸ್ಲಾಬ್ ಅಳವಡಿಸಿಕೊಡುವುದಾಗಿ ಭರವಸೆ ನೀಡಿದರು. ಅಂಗನವಾಡಿಯ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆಯಾಗುತ್ತಿದೆಯೇ ಎಂದು ವಿಚಾರಿಸಿದರು.
ನಂತರ ಮಾತನಾಡಿದ ಸದಸ್ಯ ಕೆ.ಬಿ.ಶಂಶುದ್ಧೀನ್, ನವಗ್ರಾಮದ ಅಂಗನವಾಡಿ ಕೇಂದ್ರವನ್ನು 1.6 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಣ್ಣ ಪುಟ್ಟ ರಿಪೇರಿ ಕೆಲಸಗಳು ಬಾಕಿಯಿದ್ದು, ಆದಷ್ಟು ಬೇಗನೇ ಕೆಲಸ ಪೂರ್ಣಗೊಳಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಅಂಗನವಾಡಿಯ ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಆರ್.ಓ ಯೂನಿಟ್ ಅಳವಡಿಸಲಾಗುವುದು ಎಂದರು.
ಈ ಸಂದರ್ಭ ಅಂಗನವಾಡಿ ಶಿಕ್ಷಕಿ ಕಲಾವತಿ ಹಾಗೂ ಗ್ರಾಮಸ್ಥರು ಇದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*