ಮಡಿಕೇರಿ ಮಾ.17 : ಕರ್ನಾಟಕ ರಾಜ್ಯ ಕಾಂಗ್ರೆಸ್ ಸಾಮಾಜಿಕ ನ್ಯಾಯ ವಿಭಾಗಕ್ಕೆ ಉಪಾಧ್ಯಕ್ಷರಾಗಿ ಕಿರುಗೂರು ಗ್ರಾಮದ ಕೊರಕುಟ್ಟೀರ ಸರ ಚಂಗಪ್ಪ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ನೇಮಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷ ದ್ವಾರಕನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರಕುಟ್ಟೀರ ಸರ ಚಂಗಪ್ಪ ಕಿರುಗೂರು ಗ್ರಾಮ ಪಂಚಾಯಿತಿ ಸದಸ್ಯರಾಗಿ 1999 ರಿಂದ 2015ರವರಗೆ ಸತತ ಮೂರುಬಾರಿ ಆಯ್ಕೆಯಾಗಿ, ಗ್ರಾ.ಪಂ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಕೃಷಿ ಪತ್ತಿನ ಸಹಕಾರ ಸಂಘ ಪೊನ್ನಂಪೇಟೆ ಶಾಖೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಇವರು ಕೊಡಗು ಹೆಗ್ಗಡೆ ಸಮಾಜದ ಉಪಾಧ್ಯಕ್ಷರಾಗಿದ್ದಾರೆ.
ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪನವರು ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿ ಪರವಾಗಿ ಅಭಿನಂದನೆ ಸಲ್ಲಿಸಿದರು.