ಮಡಿಕೇರಿ ಮಾ.17 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ವಾರ್ಷಿಕೋತ್ಸವದ ಅಂಗವಾಗಿ ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು.
ಮಾ.16 ರಂದು ಸಂಜೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಷಾಲಕ ಬಲಿ), ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಇಂದು ಮುಂಜಾನೆಯಿಂದಲೇ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ಜರುಗಿದವು.
ಮಧ್ಯಾಹ್ನ ಮಹಾ ಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ನಗರದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.