ಮಡಿಕೇರಿ ಮಾ.17 : ಜಿಲ್ಲಾಡಳಿತ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನದ ಜೊತೆಗೆ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಿನ್ನೆಲೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಮಾ.18 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಸಂಚಾರ ಮತ್ತು ವಾಹನ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಅವರು ತಿಳಿಸಿದ್ದಾರೆ.
ಬದಲಾವಣೆ ಮಾಡಲಾಗಿರುವ ಸ್ಥಳಗಳ ಮಾಹಿತಿ ಇಂತಿದೆ: ಮಡಿಕೇರಿ ನಗರದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆ ನಿಷೇದಿಸಲಾಗಿದೆ. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆಯ ದೊಡ್ಡ ತಿರುವು ವರೆಗೆ (ಎಂಆರ್‍ಎಫ್ ಟೈರ್ ಶಾಪ್) ವರೆಗೆ ವಾಹನ ನಿಲುಗಡೆ ನಿಷೇದಿಸಲಾಗಿದೆ, ನಗರದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದಿಂದ ರಾಜಸೀಟ್ ಮಾರ್ಗವಾಗಿ ಸಾಯಿ ಗ್ರೌಂಡ್ ತಿರುವಿನ ವರೆಗೆ ಸಂಚಾರ ಹಾಗೂ ನಿಲುಗಡೆ ನಿಷೇಧಿಸಲಾಗಿದೆ.
ನಗರದ ಮೊಣಪ್ಪ ಗ್ಯಾರೇಜ್ ಜಂಕ್ಷನ್‍ನಿಂದ ಪತ್ರಿಕಾ ಭವನ ಜಂಕ್ಷನ್‍ವರೆಗೆ ದ್ವಿಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗೂ ರಸ್ತೆಯ ಎರಡು ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹಾಗೆಯೇ ಸಮಾವೇಶಕ್ಕೆ ಬರುವಂತಹ ಬಸ್ಸುಗಳಿಗೆ ಹೊಸ ಖಾಸಗಿ ಹಾಗೂ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಚಕ್ರ ವಾಹನಗಳಿಗೆ ಎಪಿಎಂಸಿ ಹಾಗೂ ಕೋಟೆ ಆವರಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಸರ್ಕಾರಿ ವಾಹನಗಳಿಗೆ ಮೂರ್ನಾಡು ರಸ್ತೆಯಲ್ಲಿರುವ ನಿರೀಕ್ಷಣಾ ಮಂದಿರದ ಮುಂದಿನ ಆವರಣ ಹಾಗೂ ಸಂತ ಮೈಕಲರ ಚರ್ಚ್ ಆವರಣದಲ್ಲಿ ವಾಹನ ನಿಲುಗಡೆಗೆ ಕಲ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*