Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡವರ ಹಕ್ಕನ್ನು ಕೊಡವರಿಗೇ ನೀಡಿ : ಸಿಎನ್‌ಸಿ ಒತ್ತಾಯ
ಇತ್ತೀಚಿನ ಸುದ್ದಿಗಳು

ಕೊಡವರ ಹಕ್ಕನ್ನು ಕೊಡವರಿಗೇ ನೀಡಿ : ಸಿಎನ್‌ಸಿ ಒತ್ತಾಯ

March 17, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.17 : ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರಂತರವಾಗಿ ಹೋರಾಟ ನಡೆಸುತ್ತಲೇ ಬರುತ್ತಿದೆ. ಆದರೆ ಇತ್ತೀಚೆಗೆ ಕೆಲವರು ಕೊಡವರ ಹೆಸರಿನಲ್ಲಿ ಕೊಡವ ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ರತಿಮ ದೇಶಪ್ರೇಮಿ ಕೊಡವರನ್ನು ಅನ್ಯಾಯವಾಗಿ ಧಮನಿಸುವ ಪ್ರಯತ್ನಗಳು ನಡೆಯುತ್ತಿದೆ. ಈ ದೇಶದ ಸರ್ವಜನರಿಗೂ ಸಂವಿಧಾನದ ಆಶಯದಂತೆ ಹಕ್ಕು ನೀಡಬೇಕು ಆ ಹಕ್ಕನ್ನು ರಾಜ್ಯದಲ್ಲಿರುವ ಮತ್ತು ಕೊಡಗಿನಲ್ಲಿರುವ ಹತ್ತಾರು ಇತರೆ ಸಮುದಾಯಗಳು ಅವರ ವಂಶವಾಹಿ ಮತ್ತು ಮೂಲ ಕುಲ ಕಸುಬಿನಂತೆ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ ತಮ್ಮ ಅಸಲಿಯತ್ತನ್ನು ಮರೆಮಾಚಿ ಕೊಡವರ ಹೆಸರಿನಲ್ಲಿ ಕೊಡವರಿಗೆ ದೊರಕುವ ಹಕ್ಕನ್ನು ಅಪಹರಿಸಿ ಧಕ್ಕಿಸಿಕೊಳ್ಳಬಾರದಷ್ಟೆ ಎಂದರು.
ಕೊಡವ ಸಮುದಾಯಗಳು ಎಂಬ ಯಾವುದೇ ಗುಂಪುಗಳಿಲ್ಲ, ಕೇವಲ ಕೊಡವ ಸಮುದಾಯ ಎನ್ನುವ ಏಕೈಕ ಗುಂಪಿದೆ. ರಾಜ್ಯದ ಮುಖ್ಯಮಂತ್ರಿಗಳು ಜನಸಂಖ್ಯಾ ಶಾಸ್ತ್ರದ ಬಗ್ಗೆ ಮಾಹಿತಿ ಪಡೆದು ಚಾರಿತ್ರಿಕ ಪ್ರಮಾದವನ್ನು ಸರಿಪಡಿಸಬೇಕು. ಒಂದು ವೇಳೆ ಮನವಿಯನ್ನು ಧಿಕ್ಕರಿಸಿದರೆ ಮುಂದೆ ಕಾನೂನಾತ್ಮಕ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸರ್ವ ಜನರ ಕಲ್ಯಾಣಕ್ಕೆ ರಚಿಸಿರುವ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ನಡೆಸುವವರು ಸಂವಿಧಾನಿಕ ಆಶಯಕ್ಕೆ ಅಪಚಾರವೆಸಗಬಾರದು. ಸರ್ಕಾರ ಕೊಡವ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಮರು ಅಧ್ಯಯನವನ್ನು ಮಾಡುವಂತೆ ಆದೇಶಿಸಬೇಕೆಂದು ಒತ್ತಾಯಿಸಿದರು.
ಕೊಡವ ಹೆಗ್ಗುರುತು, ಅನನ್ಯತೆ ಮತ್ತು ಅಸ್ಮಿತೆಯನ್ನು ಧ್ವಂಸ ಮಾಡಲು ದೇವಾಟುಪರಂಬ್ ಫಲಾನುಭವಿಗಳು ಹೊಂಚು ಹಾಕುವುದರ ಮೂಲಕ ಸಂಚು ನಡೆಸುತ್ತಿದ್ದಾರೆ. ಮತ್ತೊಂದು ಕಡೆಯಿಂದ ಭಾಷಿಕರೆನ್ನುವ ಕೂಟ ಕೊಡವರೊಳಗೆ ಪರಕಾಯ ಪ್ರವೇಶ ಮಾಡಲು ಕಿಡಿಗೇಡಿ ಜನಪ್ರತಿನಿಧಿಯೊಬ್ಬರು ಕಾರಣವೆಂದು ನಾಚಪ್ಪ ಆರೋಪಿಸಿದರು.
ಕೇವಲ ಒಂದು ಲಕ್ಷದಷ್ಟಿರುವ ಕೊಡವರು ಸಂವಿಧಾನಿಕವಾಗಿ ಸಿಗಬೇಕಾದ ಬುಡಕಟ್ಟು ಹಕ್ಕು ಕೇಳಿದರೆ ಇವರುಗಳ ದೃಷ್ಟಿಯಲ್ಲಿ ಸಂಕುಚಿತ ಮನಸ್ಥಿತಿ ಮತ್ತು ಮತೀಯವಾದ. ಕರ್ನಾಟಕದ 50 ಶಾಸಕರು ತಾವು ಹೊಂದಿರುವ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಬೇಕೆನ್ನುವ ಹೋರಾಟದಲ್ಲಿ ಕೊಡವ ಹೃದಯ ಭಾಗದಿಂದ ಆಯ್ಕೆಯಾದ ಜನಪ್ರತಿನಿಧಿ ಬಹಿರಂಗವಾಗಿ ಭಾಗವಹಿಸುವುದು ಜಾತ್ಯಾತೀತತೆ ಮತ್ತು ಬಹುತ್ವದ ಸಂಕೇತವೇ ಎಂದು ಪ್ರಶ್ನಿಸಿರುವ ಅವರು ಇವರಿಗಿರುವ ಜನಸಂಖ್ಯಾ ಶಾಸ್ತ್ರದ ತೂಕದ ಆಧಾರದಲ್ಲಿ ಏನು ಬೇಕಾದರೂ ಮಾಡಬಹುದು, ಆದರೆ ಕೊಡವರಂತಹ ಅತೀ ಸೂಕ್ಷ್ಮ ನಗಣ್ಯ ಸಮುದಾಯ ಏನೂ ಕೇಳಬಾರದೆಂಬ ಮನಸ್ಥಿತಿಯೇ ಅತ್ಯಂತ ಅಪಾಯಕಾರಿ ಎಂದರು.
ಸುದ್ದಿಗೋಷ್ಠಿಯಲ್ಲಿ ಕಲಿಯಂಡ ಪ್ರಕಾಶ್, ಚಂಬoಡ ಜನತ್‌ಕುಮಾರ್, ಅರೆಯಡ ಗಿರೀಶ್, ಅಪ್ಪಾರಂಡ ಪೂವಣ್ಣ ಹಾಗೂ ಬೀಪಡಿಯಂಡ ಬಿದ್ದಪ್ಪ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಬಾಳೆಲೆ : ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ
Next Article ಪೊನ್ನಂಪೇಟೆ : ಮಹಿಳೆ ಮೇಲೆ ಅತ್ಯಾಚಾರ ಆರೋಪ : ಚಾಲಕನ ಬಂಧನ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.