ಮಡಿಕೇರಿ ಮಾ.18 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಾ.19 ರಂದು 34ನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ವಹಿಸಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಹೆಚ್.ಪಿ.ನಿರ್ಮಲಾ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸ್ಮಿತಾ ಐ ಕೇರ್ ನೇತ್ರ ತಜ್ಞ ಡಾ.ಸಿ.ಆರ್.ಪ್ರಶಾಂತ್, ಸ್ತ್ರೀ ರೋಗ ತಜ್ಞೆ ಮತ್ತು ಪ್ರಸೂತಿ ವೈದ್ಯೆ ಡಾ.ಸೌಮ್ಯ ಪ್ರಕಾಶ್, ವ್ಯಾಂಡಂ ಎಂಟರ್ ಪ್ರೈಸಸ್ ಮಾಲೀಕ ಕೆ.ಕೆ.ದಾಮೋದರ್, ಮಡಿಕೇರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಂ.ಶ್ರೀನಿವಾಸ್, ರಾಜರಾಜೇಶ್ವರಿ ದೇವಾಲಯದ ಧರ್ಮಾಧಿಕಾರಿ ಹೆಚ್.ಎಸ್.ಗೋವಿಂದ ಸ್ವಾಮಿ, ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.







