ಮಡಿಕೇರಿ ಮಾ.18 : ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ಮನೆಮನೆಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಬೂತ್ ನಂಬರ್ 212ರ ಅಧ್ಯಕ್ಷ ಹಫೀಜ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವುದಾಗಿ ಪ್ರಮುಖರು ಮತದಾರರಿಗೆ ಭರವಸೆ ನೀಡಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಸಂಘಟನಾ ಕಾರ್ಯದರ್ಶಿ ಎಂ.ಎನ್.ರವುಫ್, ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯದರ್ಶಿ ಕೌಸರ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಖಜಾಂಜಿ ಅಜೀಜ್, ಬೂತ್ ಪ್ರಮುಖ ಹಮೀದ್, ಸೇವಾದಳದ ಹಬೀಬ್, ಹಿರಿಯ ಕಾಂಗ್ರೆಸ್ ಮುಖಂಡ ನಿಸಾರ್ ಅಹ್ಮದ್ ಹಾಗೂ ನಿರಂಜನ್ ಕ್ಸೇವಿಯರ್ ಪಾಲ್ಗೊಂಡಿದ್ದರು.









