ಮಡಿಕೇರಿ ಮಾ.18 : ಕ್ಯಾಂಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಹೆದ್ದಾರಿಯ ಯಶೋಧರ ಪುರದ ಬಳಿ ನಡೆದಿದೆ.
ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಡಿ.ಗ್ರೂಪ್ ನೌಕರ, ಹುಣಸೂರು ತಾಲ್ಲೂಕಿನ ಕೊತ್ತೆಗಾಲ ಗ್ರಾಮದ ನಿವಾಸಿ ಮಾದೇಶ್ ಗೌಡ(57) ಮೃತ ದುರ್ದೈವಿ. ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಕ್ಯಾಂಟರ್ ಗೂಡ್ಸ್ ವಾಹನ ಮತ್ತು ಹುಣಸೂರು ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.








