ಮಡಿಕೇರಿ ಮಾ.18 : ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಪಂಪ್ ಸೆಟ್ ಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಬೇಕೆನ್ನುವ ಬೇಡಿಕೆ ಇತ್ತು. ಕೊಡಗಿನ ಬೆಳೆಗಾರರ ಸಂಕಷ್ಟವನ್ನು ಅರಿತಿರುವ ನಾನು 10 ಹೆಚ್.ಪಿ.ವಿದ್ಯುತನ್ನು ಉಚಿತವಾಗಿ ನೀಡಲು ಆದೇಶಿಸಿದ್ದೇನೆ. ಬೆಳೆಗಾರರ ಹಳೆಯ ಬಾಕಿಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ 10 ಹೆಚ್.ಪಿ.ವಿದ್ಯುತ್ ಅನ್ನು ಉಚಿತವಾಗಿ ನೀಡಬೇಕೆಂದು ಈ ವೇದಿಕೆ ಮೂಲಕ ಅಧಿಕಾರಿಗಳಿಗೆ ಆದೇಶಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.









