ಮಡಿಕೇರಿ ಮಾ.18 : ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 539.86 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಿದರು.
ರಾಜ್ಯ ಸರ್ಕಾರವು ಕಳೆದ ಮೂರುವರೆ ವರ್ಷಗಳಿಂದ ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣದಲ್ಲಿ ಮಹಿಳಾ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ಇಂದು ಉದ್ಘಾಟಿಸಲಾಗುತ್ತಿದೆ. ಕೊಡಗು ಜಿಲ್ಲೆ ಕೃಷಿ ಪ್ರಧಾನವಾಗಿದ್ದು, ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಸ್ತುತ ಬಜೆಟ್‍ನಲ್ಲಿ ಸರ್ಕಾರ ರಸ್ತೆ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಪ್ಯಾಕೇಜ್‍ನ್ನು ಪ್ರಕಟಿಸಲಾಗಿದೆ. ಹಾಗೆಯೇ ಮೈಸೂರು-ಕುಶಾಲನಗರ ಚತುಷ್ಪಥ ಮಾರ್ಗ 92 ಕಿ.ಮೀ. ಉದ್ದದ ಹೆದ್ದಾರಿ ಅಭಿವೃದ್ಧಿಗೆ 4,128 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
ರಾಜ್ಯವು ಪ್ರಗತಿಯ ಹಾದಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿದೆ. ರೈತ ವಿದ್ಯಾನಿಧಿ ಯೋಜನೆ, ನೇಕಾರರು ಮತ್ತು ಮೀನುಗಾರರ ಸಾಲಮನ್ನಾ, ಅಮೃತ ಗ್ರಾಮ ಪಂಚಾಯಿತಿ ಯೋಜನೆ, ಕುಟೀರ ಜ್ಯೋತಿ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಗ್ರಾಮ ಒನ್ ಕೇಂದ್ರಗಳ ಸ್ಥಾಪನೆ, ಜನಸೇವಕ ಯೋಜನೆ, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹೀಗೆ ಹಲವು ಜನಪರ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸಲಾಗುತ್ತಿದೆ.
ಕೊಡಗು ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳೆಂದು ಗುರುತಿಸಿ ಅಭಿವೃದ್ಧಿಪಡಿಸಲಾಗುತ್ತಿದೆ. ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸಲು, ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ.
ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಸ್ಥೆಗಳಿಗೆ ತಲಾ ರೂ.30 ಲಕ್ಷದಂತೆ ಮೂರು ವರ್ಷದ ಅವಧಿಯಲ್ಲಿ ಅನುದಾನ ನೀಡಲಾಗುತ್ತದೆ.
ಶಾಲಾ, ಕಾಲೇಜುಗಳನ್ನು ಗುರುತಿಸಿ ಅಲ್ಲಿನ ವಿದ್ಯಾರ್ಥಿಗಳನ್ನು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಸರ್ಕಾರ ಕುಶಾಲನಗರದ ಚಿಕ್ಕ ಅಳುವಾರದಲ್ಲಿ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಅನುಮೋದನೆ ನೀಡಿದೆ. ರೂ.198 ಲಕ್ಷ ವೆಚ್ಚದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ.
ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಇದುವರೆಗೆ 5,189 ವಿದ್ಯಾರ್ಥಿಗಳಿಗೆ ಒಟ್ಟು ರೂ.209.98 ಲಕ್ಷ ವರ್ಗಾಯಿಸಲಾಗಿದೆ.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅಮೃತ ಶಾಲಾ ಸೌಲಭ್ಯ ಯೋಜನೆಯಡಿ 16 ಶಾಲೆಗಳ ದುರಸ್ತಿ ಮತ್ತು ನವೀಕರಣಕ್ಕೆ ರೂ.1.60 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಒಟ್ಟು 104 ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ರಚಿಸಲಾಗಿದ್ದು, 439 ವಾರ್ಡ್ ಮಟ್ಟದ ಒಕ್ಕೂಟಗಳು ಮತ್ತು 2,971 ಸ್ವಸಹಾಯ ಗುಂಪುಗಳನ್ನು ಒಳಗೊಂಡಿದೆ.
ಸಮುದಾಯ ಬಂಡವಾಳ ನಿಧಿಗೆ ಸಂಬಂಧಿಸಿದಂತೆ 103 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.1064.50 ಲಕ್ಷ ಹಾಗೂ 99 ಸ್ವಸಹಾಯ ಗುಂಪುಗಳಿಗೆ ರೂ.14.85 ಲಕ್ಷ ಸುತ್ತು ನಿಧಿಯನ್ನು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಉಳಿತಾಯ ಖಾತೆಗೆ ಬಿಡುಗಡೆ ಮಾಡಲಾಗಿದೆ.
ವಸತಿ ನಿಗಮದ ಮೂಲಕ ಜೇನುಕುರುಬ ಜನಾಂಗದ 485 ಫಲಾನುಭವಿಗಳಿಗೆ ಮನೆ ನಿರ್ಮಿಸಲು ತಲಾ ರೂ.3.50 ಲಕ್ಷದಂತೆ ಒಟ್ಟು 1,697.50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾರ್ಯಕ್ರಮ ಅನುμÁ್ಠನಗೊಳಿಸಲಾಗುತ್ತಿದೆ. 2022-23 ನೇ ಸಾಲಿನಲ್ಲಿ ಗ್ರಾಮಬಂಧ ಸೇತುವೆಗಳಡಿಯಲ್ಲಿ 23 ಕಾಮಗಾರಿಗಳನ್ನು ರೂ.130 ಲಕ್ಷ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಕ್ರಿಯಾ ಯೋಜನೆ ಅನುಮೋದನೆಯಾಗಿದೆ. ಒಟ್ಟು 23 ಕಾಮಗಾರಿಗಳಲ್ಲಿ 8 ಕಾಮಗಾರಿಗಳು ಪೂರ್ಣಗೊಂಡಿದ್ದು, 14 ಕಾಮಗಾರಿಗಳು ಪ್ರಗತಿಯಲ್ಲಿದೆ.
2022-23 ನೇ ಸಾಲಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ರೂ.35.19 ಕೋಟಿ ಅಂದಾಜು ಮೊತ್ತದ 1,730 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಶೇಕಡ 75 ರಂತೆ 26.27 ಕೋಟಿ ಅನುದಾನ ಮೊತ್ತವನ್ನು ಸಂಬಂಧಿಸಿದ ಇಲಾಖೆಗಳಿಗೆ ಈಗಾಗಲೇ ಬಿಡುಗಡೆಗೊಳಿಸಲಾಗಿದೆ.
2022-23 ನೇ ಸಾಲಿನಲ್ಲಿ ರಾಜ್ಯ ವಲಯದಿಂದ ಮಳೆಯಿಂದ ಹಾನಿಗೊಳಗಾದ 101 ರಸ್ತೆ/ ಸೇತುವೆ/ ಕಟ್ಟಡಗಳ ದುರಸ್ತಿ ಕಾಮಗಾರಿಗಳನ್ನು ರೂ. 1,210 ಲಕ್ಷ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಕ್ರಿಯಾ ಯೋಜನೆ ಅನುಮೋದನೆಯಾಗಿದೆ. 11 ಕಾಮಗಾರಿ ಪೂರ್ಣಗೊಂಡಿದ್ದು, 62 ಕಾಮಗಾರಿಗಳು ಪ್ರಗತಿಯಲ್ಲಿವೆ. 27 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿವೆ.
2022-23ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆ ವಾರ್ಷಿಕ ನಿರ್ವಹಣೆಗಾಗಿ ರೂ.848.90 ಲಕ್ಷ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಕ್ರಿಯಾಯೋಜನೆ ಅನುಮೋದನೆ ನೀಡಲಾಗಿದೆ.
ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪೆÇ್ರೀತ್ಸಾಹಿಸಲಾಗುತ್ತಿದೆ. ಕೊಡಗು ಜಿಲ್ಲೆಯ 103 ಪಂಚಾಯಿತಿಗಳಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘಗಳನ್ನು ರಚಿಸಲಾಗಿದ್ದು, ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪ್ರಗತಿಯಲ್ಲಿರುತ್ತದೆ.
ಸರ್ಕಾರದ ಸೇವೆಗಳನ್ನು ಜನರಿಗೆ ಗ್ರಾಮ ಮಟ್ಟದಲ್ಲಿ ಒದಗಿಸುವ ಉದ್ದೇಶದಿಂದ, ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ಗ್ರಾಮ ಒನ್’ ಯೋಜನೆಯನ್ನು ಅನುಷ್ಠಾನಕ್ಕೆ ತಂದು ಇಂದಿಗೆ ಒಂದು ವರ್ಷ ಪೂರ್ಣಗೊಂಡಿದ್ದು, ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 103 ಗ್ರಾಮ ಒನ್ ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದ್ದು, ಶೇಕಡಾ 33 ಕ್ಕಿಂತ ಅಧಿಕ ಹಾನಿಯಾದ ಬೆಳೆಗಳಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 46,278 ರೈತರಿಗೆ ಒಟ್ಟು ರೂ.133.80 ಕೋಟಿ ಪರಿಹಾರ ಪಾವತಿಸಲಾಗಿದೆ. ಜಿಲ್ಲೆಗೆ 99 ದೇವಾಲಯಗಳ ಅಭಿವೃದ್ಧಿಗೆ 235 ಲಕ್ಷ ಮತ್ತು 07 ಮಠಗಳ ಜೋರ್ಣೋದ್ಧಾರ ದುರಸ್ತಿಗೆ 175 ಲಕ್ಷಗಳ ಅನುದಾನ ಬಿಡುಗಡೆಯಾಗಿರುತ್ತದೆ.
ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆ ಅಭಿಯಾನದಡಿ ಕೊಡಗು ಜಿಲ್ಲೆಯಲ್ಲಿ ಒಟ್ಟು 73 ಸರ್ಕಾರಿ ಶಾಲೆಗಳ ಹೆಸರಿಗೆ ಖಾತೆ ಬದಲಾವಣೆ ಮಾಡಲಾಗಿದೆ. ಅಂಗನವಾಡಿ ಕೇಂದ್ರಗಳ ಬಗ್ಗೆಯೂ ಕ್ರಮವಹಿಸಿ ಒಟ್ಟು 156 ಅಂಗನವಾಡಿ ಕೇಂದ್ರಗಳ ಹೆಸರಿಗೆ ಖಾತೆ ಬದಲಾವಣೆÂ ಮಾಡಲಾಗಿದೆ. 2022-23 ನೇ ಸಾಲಿನಲ್ಲಿ ಮಳೆಯಿಂದಾಗಿ ಹಾನಿಯಾದ ಅಂಗನವಾಡಿ ಕಟ್ಟಡ ದುರಸ್ತಿಗೆ ತಲಾ ರೂ. 2ಲಕ್ಷದಂತೆ 38 ಅಂಗನವಾಡಿ ಕೇಂದ್ರಗಳಿಗೆ ರೂ.95 ಲಕ್ಷ ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ.
ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯಡಿ ಸಣ್ಣ ಕಾಫಿ ಬೆಳೆಗಾರರಿಗೆ ಶೇ.40 ಸಹಾಯಧನವನ್ನು ವಿತರಿಸಲಾಗುತ್ತಿದೆ. ಶೇ.90 ರಷ್ಟು ಸಬ್ಸಿಡಿ ನೀಡುವ ಮೂಲಕ ಪರಿಶಿಷ್ಟ ಜಾತಿ – ಪಂಗಡ ಕಾಫಿ ಬೆಳೆಗಾರರನ್ನು ಪೆÇ್ರೀತ್ಸಾಹಿಸಲಾಗುತ್ತಿದೆ. ಈ ಜಿಲ್ಲೆಯಲ್ಲಿ ಒಟ್ಟು 2259 ಫಲಾನುಭವಿಗಳನ್ನು ನಿಗದಿಪಡಿಸಲಾಗಿದ್ದು, ಅದರಲ್ಲಿ 383 ಫಲಾನುಭವಿಗಳಿಗೆ ಕಾಫಿ ಮಂಡಳಿಯಿಂದ ಸಹಾಯಧನ ನೀಡಲಾಗಿದೆ.
ಸುಶಿಕ್ಷಿತ ಜನರ ಜಿಲ್ಲೆಯಾಗಿರುವ ಕೊಡಗು ಅಭಿವೃದ್ಧಿ ವಿಚಾರದಲ್ಲಿಯೂ ಪ್ರಗತಿಪರವಾಗಿದೆ. ವಿವಿಧ ಇಲಾಖೆಗಳ ಅನುದಾನ ಬಳಕೆಯೊಂದಿಗೆ ಜಿಲ್ಲೆಯಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸ್ವಚ್ಛತೆಯ ಮಹತ್ವ ಸಾರುವ ನಿಟ್ಟಿನಲ್ಲಿ ಸ್ವಚ್ಛ ಭಾರತ್ ಮಿಷನ್, ಪ್ರತಿ ಮನೆಗೂ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಮಿಷನ್, ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ನಿಟ್ಟಲ್ಲಿ ವಸತಿ, ಮಹಿಳಾ ಸಶಕ್ತೀಕರಣದ ಭಾಗವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಮತ್ತು ಮಹಾತ್ಮಗಾಂಧಿ ನರೇಗಾ ಮೂಲಕ ಅನೇಕ ಜನಪರ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ.
ಒಟ್ಟಾರೆ ಇಂದು ಗಾಂಧಿ ಭವನ, ಗ್ರೇಟರ್ ರಾಜಸೀಟು, ವೈದ್ಯಕೀಯ ಕಾಲೇಜು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಾರ್ಡ್ ವಿಭಾಗ ಕಟ್ಟಡ, ಅಗ್ನಿಶಾಮಕ ಠಾಣೆ, ಪಶು ಆಸ್ಪತ್ರೆ, ಅಂಗನವಾಡಿ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಅಂಬೇಡ್ಕರ್ ಭವನ, ಕುಶಾಲನಗರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ನಿಲಯ ಹೀಗೆ ಹಲವು ಕಾಮಗಾರಿಗಳನ್ನು ಉದ್ಘಾಟಿಸಿದರು.
ಹಾಗೆಯೇ ಸಮಗ್ರ ಗಿರಿಜನ ಯೋಜನಾ ಇಲಾಖೆಯ ನೂತನ ಕಟ್ಟಡ, ವಾಲ್ಮೀಕಿ ಆಶ್ರಮ ಶಾಲೆ, ಆಶ್ರಮ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಮ್ಮತ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮಥ್ರ್ಯದ ‘ಕ್ರಿಟಿಕಲ್ ಕೇರ್ ಸೆಂಟರ್’ ಆಸ್ಪತ್ರೆ ನಿರ್ಮಿಸುವ ಕಾಮಗಾರಿಗೆ ಚಾಲನೆ, ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ, ಹೀಗೆ ಅಂದಾಜು 539.86 ಕೋಟಿ ರೂ. ಅನುದಾನದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ.










