Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇತ್ತೀಚಿನ ಸುದ್ದಿಗಳು

ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

March 18, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.18 : ಕೊಡವ ಕುಟುಂಬಗಳ ನಡುವಿನ 23ನೇ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ಕ್ಕೆ ವರ್ಣರಂಜಿತ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಚೆರಿಯಪರಂಬು ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯುಕ್ತ ಚಾಲನೆ ನೀಡಿದರು.
ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟು ಕೊಡವ ಭಾಷೆಯಲ್ಲಿ ಮಾತು ಪ್ರಾರಂಭಿಸಿದ ಮುಖ್ಯಮಂತ್ರಿ ನಶಿಸಿ ಹೋಗುತ್ತಿರುವ ಕುಟುಂಬಗಳ ನಡುವಿನ ಸಂಬoಧ ಮತ್ತೆ ಬೆಸೆಯಲು ಕುಟುಂಬಗಳ ನಡುವಿನ ಹಾಕಿ ಸಹಕಾರಿಯಾಗಿದೆ ಎಂದರು.
ಕುಟುಂಬದಲ್ಲಿ ಸದಸ್ಯರ ಸಂಬoಧ ಉತ್ತಮವಾಗಿದ್ದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಇದು ಭಾರತೀಯ ನಾಗರಿಕತೆಯಾಗಿದ್ದು, ಕೊಡವ ಕೌಟುಂಬಿಕ ಹಾಕಿ ಉತ್ಸವ ಇದಕ್ಕೆ ಸೂಕ್ತ ನಿದರ್ಶನವಾಗಿದೆ. ಹಾಕಿ ಕ್ರೀಡೆಯ ಮೂಲಕ ಕೊಡವರು ತಮ್ಮಲ್ಲಿನ ಉತ್ತಮ ಕೌಟುಂಬಿಕ ಸಂಬoಧಗಳಿಗೆ ಮಾದರಿಯಾಗಿದ್ದಾರೆ. ಕೆ.ಜಿ.ಬೋಪಯ್ಯ ಅವರು ಹಾಕಿ ಕ್ರೀಡೆಗೆ ಸೂಕ್ತ ಅನುದಾನ ತರುವಲ್ಲಿ ಶ್ರಮಿಸಿದ್ದಾರೆ. ನನ್ನಲ್ಲಿ ಬೋಪಯ್ಯ ಅವರ ನಿಯೋಗ ಬಂದಾಗ 1 ಕೋಟಿ ಕೇಳಿದ್ದರು. ತಕ್ಷಣವೇ ನಾನು 1 ಕೋಟಿ ಮಂಜೂರು ಮಾಡಿದ್ದೇನೆ ಎಂದರು.
ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ತಕ್ಷಣ ಆದೇಶ ಹೊರಡಿಸುತ್ತೇನೆ ಣೆಂದು ಮುಖ್ಯಮಂತ್ರಿ ಘೋಷಿಸಿದರು.
ಹಾಕಿ ಉತ್ಸವದ ಅಂಗವಾಗಿ ಇಂದು ಬೆಳಗ್ಗಿನಿಂದಲೆ ನಾಪೋಕ್ಲು ಚೆರಿಯಪರಂಬು ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು. ಸಂಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳನ್ನು ಅಪ್ಪಚಟ್ಟೋಳಂಡ ಕುಟುಂಬದ ಪರವಾಗಿ ಕೊಡಗಿನ ಸಾಂಪ್ರದಾಯಿಕ ಉಡುಪು ತೊಡಿಸಿ, ವಡಿ ಕತ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಎಂಎಲ್‌ಸಿ ಸುಜಾ ಕುಶಾಲಪ್ಪ , ಅಪ್ಪಚೆಟ್ಟೋಂಡ ಹಾಕಿ ಉತ್ಸವ ಸಮಿತಿಯ ಪ್ರಮುಖರು ಹಾಜರಿದ್ದರು.
ಕೊಡವ ಸಮುದಾಯದ 336 ತಂಡಗಳ ನಡುವಣ ಪಂದ್ಯಾವಳಿ ಮುಂದಿನ 23 ದಿನಗಳ ಕಾಲ ಹಾಕಿ ಪ್ರಿಯರನ್ನು ತನ್ನಡೆಗೆ ಸೆಳೆೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ತಂಡಗಳು ಪಾಲ್ಗೊಂಡಿರುವುದು ವಿಶೇಷ.
ಆಕರ್ಷಕ ಮೆರವಣಿಗೆ- ಹಾಕಿ ಉತ್ಸವದ ಅಂಗವಾಗಿ ಇಂದು ಬೆಳಗ್ಗೆ ಅಪ್ಪಚೆಟ್ಟೋಳಂಡ ಕುಟುಂಬದ ಪಟ್ಟೆದಾರ ಅಪ್ಪಚೆಟ್ಟೋಳಂಡ ಈರಪ್ಪ ಅವರ ನೇತೃತ್ವದಲ್ಲಿ, ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ಸಮುದಾಯದ ಪುರುಷರು, ಮಹಿಳೆಯರು ಮಕ್ಕಳು ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗಮನ ಸೆಳೆದರು.
1997ರಲ್ಲಿ ಮೊಟ್ಟ ಮೊದಲ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸಿದ ಪಾಂಡoಡ ಕುಟುಂಬದಿoದ ಇಲ್ಲಿಯವರೆಗೆ ಪಂದ್ಯಾವಳಿ ಆಯೋಜಿಸಿರುವ ಒಟ್ಟು 23 ತಂಡಗಳ ಪ್ರತಿನಿಧಿಗಳು ಆಕಾಶಕ್ಕೆ ಗುಂಡು ಹಾರಿಸುವುದರೊಂದಿಗೆ ಹಲ ಸಂಖ್ಯೆಯಲ್ಲ ನೆರೆದಿದ್ದ ಪ್ರೇಕ್ಷಕರ ಸಮ್ಮುಖದಲ್ಲಿ ಪಂದ್ಯಾವಳಿಗೆ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.
ಧ್ವಜಾರೋಹಣ-ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಬೋಪಣ್ಣ ಅವರು ಅಕಾಡೆಮಿಯ ಧ್ವಜಾರೋಹಣ ನೆರವೇರಿಸಿದರೆ, ಅಪ್ಪಚೆಟ್ಟೋಳಂಡ ಹಾಕಿ ಉತ್ಸವದ ಧ್ವಜವನ್ನು ಕುಟುಂಬದ ಪಟ್ಟೆದಾರ ಅಪ್ಪಚೆಟ್ಟೋಳಂಡ ಈರಪ್ಪ ಅವರು ಆರೋಹಿಸಿದರು.
ಜಿಲ್ಲೆಯ ಸಮಮಸ್ಯೆಗಳನ್ನು ಸಿಎಂ ಗಮನಕ್ಕೆ ತನ್ನಿ- ಈ ಸಂದರ್ಭ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ ಮಾತನಾಡಿ, ಸಮಾರಂಭಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು, ಈ ಸಂದರ್ಭ ಜಿಲ್ಲೆಯ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವುವಂತೆ ತಿಳಿಸಿ, ಈ ಬಾರಿಯ ಪಮದ್ಯಾವಳಿಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ತಂಡಗಳು ಪಾಲ್ಗೊಂಡಿರುವುದು ನಿಜಕ್ಕೂ ಸಂತಸವನ್ನು ತಂದಿದೆಯೆoದು ನುಡಿದರು.
ಬೆಳ್ಳಿ ರೋಲಿಂಗ್ ಟ್ರೋಫಿ- ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಬೋಪಣ್ಣ ಮಾತನಾಡಿ, ಹಾಕಿ ಪಂದ್ಯಾವಳಿಯ ಜನಕ ಪಾಂಡoಡ ಕುಟ್ಟಪ್ಪ ಅವರ ಜ್ಞಾಪಕಾರ್ಥ ಬೆಳ್ಳಿಯ ರೋಲಿಂಗ್ ಕಪ್‌ನ್ನು ನೀಡುತ್ತಿರುವುದಾಗಿ ತಿಳಿಸಿದರು.
ಮುಂದಿನ 2024 ನೇ ಸಾಲಿನಲ್ಲಿ ಕುಂಡ್ಯೋಳoಡ ತಂಡ ನಾಪೋಕ್ಲುವಿನಲ್ಲಿ, 2025ನೇ ಸಾಲಿನಲ್ಲಿ ಮುದ್ದಂಡ ಕುಟುಂಬಸ್ಥರು ಮಡಿಕೇರಿಯಲ್ಲಿ ಕೌಟುಂಬಿಕ ಹಾಕಿ ಪಂದ್ಯಾವಳಿ ನಡೆಸಲಿರುವುದಾಗಿ ಮಾಹಿತಿ ನೀಡಿದರು.
ಸಮಾರಂಭದಲ್ಲಿ ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ ಸಮಿತಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ, ಪದ್ಮಶ್ರೀ ರಾಣಿ ಮಾಚಯ್ಯ, ಪ್ರಮುಖರಾದ ರವಿ ಪೆಮ್ಮಯ್ಯ, ಮಿಥುನ್ ಮಾಚಯ್ಯ ಸೇರಿದಂತೆ ಹಲ ಗಣ್ಯರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಅಪ್ಪಂಗಳ : ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ
Next Article ಕೊಡವ ಜನಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಜಿಲ್ಲಾ ಬಿಜೆಪಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.