ಮಡಿಕೇರಿ ಮಾ.18 : ಕೊಡವ ಜನಾಂಗ ಶ್ರೇಯೋಭಿವೃದ್ಧಿಗೆ 2022ನೇ ಸಾಲಿನ ಬಜೆಟ್‌ನಲ್ಲಿ 10 ಕೋಟಿ ರೂ. ಅನುದಾನವನ್ನು ಸರ್ಕಾರ ಮೀಸಲಿಟ್ಟಿದೆ. ಇದರ ಜತೆಗೆ ಜನಾಂಗದ ಅಭಿವೃದ್ಧಿ ನಿಟ್ಟಿನಲ್ಲಿ ನಿಗಮದ ಅವಶ್ಯಕತೆಯಿದ್ದು, ಆದಷ್ಟು ಶೀಘ್ರದಲ್ಲಿ ನಿಗಮ ಘೋಷಣೆ ಮಾಡಿ ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.
ನಾಪೋಕ್ಲುವಿನಲ್ಲಿ ಮನವಿ ಪತ್ರ ಸಲ್ಲಿಸದ ಬಿಜೆಪಿ ಪ್ರಮುಖರು, ಕೊಡಗು ಜಿಲ್ಲೆಯ ಕೊಡವ ಜನಾಂಗದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ 10 ಕೋಟಿ ರೂ. ಮೀಸಲಿಟ್ಟಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದೆ.
ಕೊಡಗು ಜಿಲ್ಲೆಯಲ್ಲಿರುವ ಹಲವು ಜನಾಂಗಗಲ್ಲಿ ಕೊಡವ ಜನಾಂಗ ಕೂಡಾ ಪ್ರಮುಖವಾದುದು. ಭಾರತೀಯ ಜನತಾ ಪಕ್ಷದೊಂದಿಗೆ ಈ ಜನಾಂಗದ ಅನೇಕರು ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಗುಡ್ಡಗಾಡು ಪ್ರದೇಶವಾಗಿರುವ ಜಿಲ್ಲೆಯಲ್ಲಿ ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಜನಾಂಗ ಕೊಡವ ಜನಾಂಗ, ಭಾರತೀಯ ಸೇನೆಯಲ್ಲೂ ದೊಡ್ಡ ಪ್ರಮಾಣದ ಸೇವೆಯನ್ನು ಈ ಜನಾಂಗದವರು ಸಲ್ಲಿಸಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಈ ಜನಾಂಗ ಶ್ರೇಯೋಭಿವೃದ್ಧಿಗೆ 2022ನೇ ಸಾಲಿನ ಬಜೆಟ್‌ನಲ್ಲಿ 10 ಕೋಟಿ ರೂ. ಅನುದಾನವನ್ನು ಸರ್ಕಾರ ಮೀಸಲಿಟ್ಟಿದೆ. ಇದರ ಜತೆಗೆ ಜನಾಂಗದ ಅಭಿವೃದ್ಧಿ ನಿಟ್ಟಿನಲ್ಲಿ ನಿಗಮದ ಅವಶ್ಯಕತೆಯಿದ್ದು, ಆದಷ್ಟು ಶೀಘ್ರದಲ್ಲಿ ನಿಗಮ ಘೋಷಣೆ ಮಾಡಿ ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸುವಂತೆ ಮನವಿ ಮಾಡಿದರು.
ಕೊಡಗು ಬಿಜೆಪಿ, ಯುನೈಟೆಡ್ ಕೊಡವ ಆರ್ಗನೈಸೇಷನ್, ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳು, ಶೀಘ್ರದಲ್ಲಿ ನಿಗಮ ಘೋಷಿಸುವುದಾಗಿ ನಾಪೋಕ್ಲುವಿನಲ್ಲಿ ಪ್ರಕಟಿಸಿದರು.
ಪಕ್ಷದ ಮನವಿ ಸಲ್ಲಿಕೆ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಎಂಎಲ್ಸಿ ಸುಜಾ ಕುಶಾಲಪ್ಪ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಉಪಸ್ಥಿತರಿದ್ದರು.








