ವಿರಾಜಪೇಟೆ ಮಾ.21 : ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಬಿ.ಎಂ.ದುಶ್ಯಂತ್ ರೈ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಬಂಟರ ಸಂಘದ ಮಹಾಸಭೆಯು ಮಾ. 26 ರಂದು ಪಟ್ಟಣದ ಗೋಣಿಕೊಪ್ಪಲು ರಸ್ತೆಯಲ್ಲಿನ ಮಂಜುನಾಥ ಹೊಟೇಲ್‍ನಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯಕಾರಿ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮಹಾಸಭೆಯಲ್ಲಿ ಬಂಟರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಸಮುದಾಯ ಬಾಂಧವರು ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆಯಲ್ಲಿ ಕೋರಲಾಗಿದೆ.











