ಚೆಯ್ಯಂಡಾಣೆ ಮಾ.21 : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಕ್ಕಬೆಯ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಾಮಾಜಿಕ ಸಬಲೀಕರಣ ದಿನಾಚರಣೆ ಆಚರಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ರವರು ತಮ್ಮ ಬಹಿಷ್ಕೃತ ಹಿತಕಾರಿಣಿ ಸಭಾ ವತಿಯಿಂದ ಮೊದಲ ಬಾರಿಗೆ ಮಹಾರಾಷ್ಟ್ರ ದ ಮಹಾಡ್ ನಗರದಲ್ಲಿ ಚೌಡಾರ್ ಕೆರೆ ಆಂದೋಲನ ನಡೆಸಿದ್ದು, ಇದು ಅಸ್ಪೃಶ್ಯತೆ ಆಚರಣೆ ವಿರುದ್ಧ ಜಾಗೃತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಅಶೋಕ್ ಆಗಮಿಸಿ ದಿನದ ಮಹತ್ವದ ಕುರಿತು ಉಪನ್ಯಾಸ ಹಾಗೂ ಜಾಗೃತಿ ಮೂಡಿಸಿದರು.
ಈ ಸಂದರ್ಭ ಸ್ಥಳೀಯ ಗ್ರಾ.ಪಂ ಅಧ್ಯಕ್ಷ ಸಂಪನ್ ಅಯ್ಯಪ್ಪ ಮತ್ತಿತರರು ಇದ್ದರು.
ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ. ಸ್ವಾಗತಿಸಿ, ವಂದಿಸಿದರು.
ವರದಿ : ಅಶ್ರಫ್













