ನಾಪೋಕ್ಲು ಮಾ.23 : ಕರ್ನಾಟಕ ಪಬ್ಲಿಕ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಗಳಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮೂರು ತಿಂಗಳ ಕಾಲ ನಡೆದ ಟ್ಯೂಷನ್ ಕ್ಲಾಸ್ ನ ಸಮಾರೋಪ ಸಮಾರಂಭ ನಡೆಯಿತು.
ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಿನೇಶ್ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ನಾಪೋಕ್ಲು ಗ್ರಾ.ಪಂ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಮಾತನಾಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಕ್ಕಳ ಓದಿನ ಮತ್ತು ಪರೀಕ್ಷೆಯ ವಿಷಯದ ಬಗ್ಗೆ ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಕೆ.ಎ.ಹ್ಯಾರಿಸ್, ಉಪ ಪ್ರಾಂಶುಪಾಲ ಶಿವಣ್ಣ , ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕ ಸಂತೋಷ್, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೇಯ, ಎಸ್‌ಡಿಎಂಸಿ ಸದಸ್ಯರಾದ ರಾಜೇಶ್ ಗ್ರೇಸಿ, ಶಿಕ್ಷಕಿ ಉಷಾ ರಾಣಿ , ಶಾಲೆಯ ಸಿಬ್ಬಂದಿ ವರ್ಗ , ಸೇವಾಪ್ರತಿನಿಧಿ ಉಮಾಲಕ್ಷ್ಮಿ , ಜ್ಞಾನವಿಕಾಸ ಸಂಘಗಳ ಸದಸ್ಯರು ಹಾಗೂ ಮಕ್ಕಳು ಪೋಷಕರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ