ಮಡಿಕೇರಿ ಮಾ.23 : ಮಡಿಕೇರಿ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಶ್ರೀ ಭಗವತಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಈಶ್ವರ ದೇವಸ್ಥಾನದ ಕಾಂಕ್ರಿಟ್ ರಸ್ತೆಯನ್ನು ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.
ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.