ಮಡಿಕೇರಿ ಮಾ.23 : ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ಸಿಂಹ ಅವರು ಸಂಸದರ ನಿಧಿಯಿಂದ ನೀಡಿರುವ (Advance Life Support Ambulance)ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನವನ್ನು ಹಸ್ತಾಂತರ ಮಾಡಲಾಯಿತು.
ಸಂಸದ ಪ್ರತಾಪ್‌ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.