ಮಡಿಕೇರಿ ಮಾ.23 : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ವಿಧಾನಸಭಾ ಕ್ಷೇತ್ರದ ಸಂಯೋಜಕರುಗಳನ್ನಾಗಿ ಮತ್ತು ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ನ ಸಹ ಸಂಯೋಜಕರುಗಳನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನಂತೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ.ಪಾಟೀಲ್ ಅವರ ಅನುಮೋದನೆಯೊಂದಿಗೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಹ ಸಂಯೋಜಕರಾದ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ನೇಮಕಾತಿ ಮಾಡಿ ಆದೇಶ ಪತ್ರ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಕೊಲ್ಯದ ಗಿರೀಶ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಜಿ.ಎಂ.ಕಾಂತರಾಜು ಅವರನ್ನು ನೇಮಿಸಲಾಗಿದೆ. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ನ ಸಹ ಸಂಯೋಜಕರಾಗಿ ಈ ಕೆಳಕಂಡವರನ್ನು ನೇಮಿಸಲಾಗಿದೆ.
ಮತ್ರಂಡ ದಿಲ್ಲು (ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್), ಹನೀಫ್ ಪಿ.ಎ (ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್), ಬೊಳ್ಳಂಡ ಗಿರೀಶ್ (ಶರಿ) (ನಾಪೋಕ್ಲು ಬ್ಲಾಕ್ ಕಾಂಗ್ರೆಸ್), ಪ್ರಕಾಶ್ ಆಚಾರ್ಯ (ಮಡಿಕೇರಿ ಬ್ಲಾಕ್ ಕಾಂಗ್ರೆಸ್) ಪಿ.ಎಂ.ಲತೀಫ್, (ಕುಶಾಲನಗರ ಬ್ಲಾಕ್ ಕಾಂಗ್ರೆಸ್) ಹಾಗೂ ಜನಾರ್ಧನ ಜಿ.ಎಲ್ (ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್) ಅವರುಗಳನ್ನು ನೇಮಿಸಲಾಗಿದೆ ಎಂದು ರಮೇಶ್ ತಿಳಿಸಿದ್ದಾರೆ.