ಮಡಿಕೇರಿ ಮಾ.23 : ಉಂಗುರ ನುಂಗಿದ 8 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಮುನೀರ್ ಎಂಬುವವರ ಮಗು ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು ಎಂದು ಹೇಳಲಾಗಿದೆ. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಶಸ್ತ್ರ ಚಿಕಿತ್ಸೆಯ ಮೂಲಕ ಉಂಗುರವನ್ನು ಹೊರ ತೆಗೆಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಗು ಮೃತಪಟ್ಟಿದೆ.