ಮಡಿಕೇರಿ ಮಾ.23 : ಅಖಿಲ ಕರ್ನಾಟಕ ಒಕ್ಕಲಿಗರ ಸಂಘ (ರಿ) ಮೈಸೂರು ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಘಟಕ ಉದ್ಘಾಟನಾ ಕಾರ್ಯಕ್ರಮ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ, ನೇಮಕಾತಿ ಪತ್ರ ವಿತರಣೆ, ಸಾಧಕರಿಗೆ ಡಾ. ಬಾಲಗಂಗಾಧರನಾಥ ಸ್ವಾಮಿ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಂಜಾವಧೂತ ಮಹಾ ಸ್ವಾಮೀಜಿರವರು, ಸಂಸದ ಪ್ರತಾಪ್ ಸಿಂಹ ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಹರೀಶ್ ಗೌಡ, ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.