ಮಡಿಕೇರಿ ಮಾ.23 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಲಾಯಿತು. ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.













