ಮಡಿಕೇರಿ ಮಾ.23 : ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಫುಟ್ಬಾಲ್ ಕ್ಲಬ್ ಗಳಲ್ಲೊಂದಾದ ಕಿಕ್ಕ್ ಸ್ಟಾರ್ಟ್ ಫುಟ್ಬಾಲ್ ತಂಡಕ್ಕೆ ಮಾ.26 ರಂದು ಅಮ್ಮತ್ತಿ ಪ್ರೌಢ ಶಾಲಾ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅಮ್ಮತ್ತಿ ಪ್ರೌಢ ಶಾಲಾ ಮೈದಾನದಲ್ಲಿ ಅಂಡರ್ 11 ರಿಂದ 21 ವರ್ಷದ ಯುವ ಫುಟ್ಬಾಲ್ ಆಟಗಾರರು ಹಾಗೂ ಮಹಿಳಾ ಆಟಗಾರ್ತಿಯರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಹಾಗೂ ಸಂಪೂರ್ಣ ಫುಟ್ಬಾಲ್ ಕಿಟ್ ನೊಂದಿಗೆ ಬೆಳಗ್ಗೆ 8.30 ಗಂಟೆಗೆ ಅಮ್ಮತ್ತಿ ಪ್ರೌಢ ಶಾಲಾ ಮೈದಾನದಲ್ಲಿ ಹಾಜರಿರಬೇಕೆಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ನಾಗೇಶ್ (ಈಶ್ವರ್) ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ 94489 76421 ಹಾಗೂ ಕಾರ್ಯದರ್ಶಿ ನಾಗೇಶ್ (ಈಶ್ವರ್) 94810 58256 ಸಂಪರ್ಕಿಸ ಬಹುದಾಗಿದೆ.