*ಅರ್ಜಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಟ್ಯಾಂಕ್ ಉದ್ಘಾಟನೆ*
1 Min Read
ಮಡಿಕೇರಿ ಮಾ.23 : ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ ಕುಡಿಯುವ ನೀರು ಸರಬರಾಜು ಟ್ಯಾಂಕ್ ಅನ್ನು ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.
ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.