ಮಡಿಕೇರಿ ಮಾ.23 : ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ಮಾರ್ಚ್, 24 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಿಂದ ಬಾಲಭವನದವರೆಗೆ ಜಾಥಾ ನಡೆಯಲಿದೆ.
ಜಾಥಾವನ್ನು ಹಿರಿಯ ಪ್ರಧಾನ ನ್ಯಾಯಾಧೀಶರು ಹಾಗೂ ಜಿಲ್ಲಾಧಿಕಾರಿ ಅವರು ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಬಾಲಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಕ್ಷಯ ರೋಗ ನಿವಾರಣಾ ಕೇಂದ್ರದ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.









