ಮಡಿಕೇರಿ ಮಾ.23 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರಗಳ ಸ್ಥಾಪನೆ ಸಂಬಂಧ ನಗರದ ಸಂತ ಜೋಸೆಫರ ಕಾಲೇಜಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಕ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜು, ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಸೆಸ್ಕ್ ಎಂಜಿನಿಯರ್ ಸಂಪತ್, ತಹಶೀಲ್ದಾರ್ ಕಿರಣ್, ಸಂತ ಜೋಸೆಫರ ಶಾಲೆಯ ಪ್ರಾಂಶುಪಾಲರು ಇತರರು ಇದ್ದರು.









