ನಾಪೋಕ್ಲು ಮಾ.24 : ಶಾಲೆಯ ಬೀಗ ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೋಜು ಮಸ್ತಿ ಮಾಡಿ ಪರಾರಿಯಾಗಿರುವ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಹಳೇ ತಾಲ್ಲೂಕು ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಪ್ರಾಥಮಿಕ ಪಬ್ಲಿಕ್ ಶಾಲೆಯ ಕೊಠಡಿಯ ಬೀಗ ಹೊಡೆದು ಒಳನುಗ್ಗಿದ ಕಿಡಿಗೇಡಿಗಳು ಅನೈತಿಕ ಚಟುವಟಿಕೆ ಅನೈತಿಕ ಚಟುವಟಿಕೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಶಾಲೆಗೆ ಬಂದಾಗ ಶಾಲೆಯ ಒಳಾಂಗಣದ ಕೊಠಡಿಯ ಬೀಗ ಹೊಡೆದಿರುವುದು ಗೋಚರಿಸಿದೆ. ಈ ಬಗ್ಗೆ ಮಕ್ಕಳು ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಶಿಕ್ಷಕರು ಪರಿಶೀಲಿಸಿದಾಗ ಶಾಲೆಯ ಮೇಲ್ಚಾವಣಿಯಲ್ಲಿ ಮಹಿಳೆ ಮತ್ತು ಗಂಡಸರ ಬಟ್ಟೆಗಳು ಹಾಗೂ ಸಿಗರೇಟ್ ತುಂಡುಗಳು ಪತ್ತೆಯಾಗಿದೆ. ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ, ಶಾಲೆಯ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎನ್. ಎಸ್. ಶಿವಣ್ಣ, ಆಡಳಿತ ಮಂಡಳಿ ಸದಸ್ಯ ರಾಜೇಶ್, ಶಾಲೆಯ ಶಿಕ್ಷಕರು ಮತ್ತಿತರು ಹಾಜರಿದ್ದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*