ನಾಪೋಕ್ಲು ಮಾ.24 : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಪಾಲೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಿ ಭಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಪಂಚಲಿಂಗೇಶ್ವರ ದೇವಾಲಯದ ಆವರಣದಲ್ಲಿ ರೂ.55 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇವಾಲಯದ ತಡೆಗೋಡೆ ಕುಸಿದಿದ್ದು, ಸಾರ್ವಜನಿಕರಿಂದ ತಡೆಗೋಡೆ ನಿರ್ಮಿಸಬೇಕೆಂದು ಮನವಿ ಬಂದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮುಖಾಂತರ 55 ಲಕ್ಷ ರೂ.ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ ಎಂದರು.
ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷ ನಾಪಂಡ ರ್ಯಾಲಿ (ryali) ಮಾದಯ್ಯ ಮಾತನಾಡಿ ಕಾಮಗಾರಿಯ ಮಾಹಿತಿಯನ್ನು ನೀಡಿದರು.
ಇದಕ್ಕೂ ಮುನ್ನ ಅರ್ವತ್ತೋಕ್ಲು ಗ್ರಾಮ ವ್ಯಾಪ್ತಿಯಲ್ಲಿ 2.15 ಕೋಟಿ ರೂ.ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.
ಈ ಸಂದರ್ಭ ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಎಡಿಕೇರಿ ವಾಸುದೇವ್, ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಎ ರಾಮಣ್ಣ, ಎಡಿಕೇರಿ ಪ್ರವೀಣ, ಕಾಫಿ ಮಂಡಳಿ ಮಾಜಿ ಅಧಿಕಾರಿ ಅಚ್ಚುಡ ಅನಂತ್ ಕುಮಾರ್, ಗ್ರಾ.ಪಂ ಸದಸ್ಯರಾದ ಬೈತಡ್ಕ ಡೆಲ್ವಿದೇವಯ್ಯ, ಪೊದವಾಡ ಮೀನಾಕ್ಷಿ, ಬೆಟ್ಟಗೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಡ್ಯದ ವಿಜಯಕುಮಾರ್, ಚೆರುವಳoಡ ಅಶೋಕ್, ನಯನ, ಕವಿತಾ ರಾಜೇಶ್, ಅರ್ಚಕರಾದ ದೇವಿ ಪ್ರಸಾದ್ ಮತ್ತು ಅರುಣ, ಪಾರುಪತ್ಯೆಗಾರ ತೂರಿರ ಮನು, ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ