ಮಡಿಕೇರಿ ಮಾ.24 : ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯಗಳಿಕೆ ತರಬೇತಿ ಯೋಜನೆಯಡಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ವಿರಾಜಪೇಟೆಯ ಶಿವಕೇರಿಯ 30 ಪಲಾನುಭವಿಗಳಿಗೆ ಸಂಸದ ಪ್ರತಾಪ್ ಸಿಂಹ ಪ್ರಮಾಣಪತ್ರ, ರೂ.6000 ವಿದ್ಯಾರ್ಥಿವೇತನ ಮತ್ತು ಹೊಲಿಗೆ ಯಂತ್ರವನ್ನು ವಿತರಿಸಿ ಶುಭಕೋರಿದರು.
ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಅಧಿಕಾರಿಗಳು ಹಾಜರಿದ್ದರು.