ನವದೆಹಲಿ ಮಾ.24 : ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.













