ಸೋಮವಾರಪೇಟೆ ಮಾ.24 : ಯಡೂರು ಬಿ.ಟಿ.ಸಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಗಳು ಮಾ.27 ರಂದು ಲೋಕಾರ್ಪಣೆಗೊಳ್ಳಲಿದೆ.
ಬೆಳಿಗ್ಗೆ 10 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯ್ರಮದಲ್ಲಿ ರೂ.50ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಭಾಭವನ, 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತರಗತಿ ಕಟ್ಟಡ, 40 ರೂ. ವೆಚ್ಚದಲ್ಲಿ ನವೀಕರಣ ಗೊಂಡಿರುವ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಧುನೀಕರಣ ಗೊಂಡಿರುವ ಕಂಪ್ಯೂಟರ್ ಲ್ಯಾಬ್ ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.