ಮಡಿಕೇರಿ ಮಾ.24 : ಮಡಿಕೇರಿ ನಗರಸಭೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಮತ್ತು ಎಲ್ಲಾ ರೀತಿಯ ತೆರಿಗೆಗಳನ್ನು ಶೇ.3ರಷ್ಟು ಹೆಚ್ಚಿಸಿರುವುದು ಸರಿಯಾದ ಕ್ರಮವಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಆಡಳಿತ ಮಂಡಳಿ ತಕ್ಷಣ ಈ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ವರ್ಷ ಶೇ.5 ರಷ್ಟು ತೆರಿಗೆ ಏರಿಕೆ ಮಾಡಿದ್ದ ನಗರಸಭೆ ಇದೀಗ ಮತ್ತೆ ಶೇ.3 ರಷ್ಟು ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ನಗರದ ಕಟ್ಟಡಗಳ ಮತ್ತು ಮನೆಗಳ ಮಾಲೀಕರಿಗೆ ತೆರಿಗೆ ಹೊರೆಯಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದು, ಜೀವನ ಸಾಗಿಸುವುದೇ ಕಷ್ಟವಾಗಿದೆ. ಕಟ್ಟಡ ಮಾಲೀಕರುಗಳು ಬ್ಯಾಂಕ್ ಸಾಲ ತೀರಿಸಲಾಗದ ಪರಿಸ್ಥಿತಿಯಲ್ಲಿದ್ದಾರೆ, ಸಾಲದ ಬಡ್ಡಿ ದರವೂ ಅಧಿಕವಾಗಿದೆ. ಇದರ ನಡುವೆಯೇ ಪ್ರತಿ ವರ್ಷ ತೆರಿಗೆ ಏರಿಕೆ ಮಾಡಿದರೆ ಪಾವತಿ ಮಾಡುವುದಾದರು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ ಆದೇಶವಿದೆ ಎಂದು ತೆರಿಗೆ ಪರಿಷ್ಕರಣೆ ಮಾಡಲೇಬೇಕೆಂದು ಬಿಜೆಪಿ ಸದಸ್ಯರ ನೇತೃತ್ವದ ಆಡಳಿತ ಹಾಗೂ ಅಧಿಕಾರಿಗಳು ಹೇಳುವುದರಲ್ಲಿ ಅರ್ಥವಿಲ್ಲ. ಸ್ಥಳೀಯ ಜನರ ಸಮಸ್ಯೆಗಳು ಮತ್ತು ಆರ್ಥಿಕ ಸಂಕಷ್ಟವನ್ನು ಅರಿತು ತೆರಿಗೆ ಹಾಕಬೇಕೆ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸಬೇಕಾಗುತ್ತದೆ. ಇಲ್ಲಿನ ನೈಜ ಪರಿಸ್ಥಿತಿಯನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಅವಕಾಶ ಶಾಸಕರುಗಳಿಗೆ ಇದೆ. ಆದ್ದರಿಂದ ನಗರಸಭೆಯ ಆಡಳಿತ ಮಂಡಳಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕಾಗಿದೆ ಎಂದು ರಮೇಶ್ ಸಲಹೆ ನೀಡಿದ್ದಾರೆ.
ಕಳೆದ ವರ್ಷ ಮತ್ತು ಈ ಬಾರಿಯದ್ದು ಸೇರಿ ಶೇ.8 ರಷ್ಟು ತೆರಿಗೆ ಏರಿಕೆಯಾದಂತ್ತಾಗಿದೆ. ಇದು ದುಬಾರಿಯಾಗಿದ್ದು, ಜನಹಿತಕ್ಕಾಗಿ ಪಕ್ಷಭೇದ ಮರೆತು ತೆರಿಗೆ ಇಳಿಕೆಗೆ ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ವಿರಾಜಪೇಟೆ ಪುರಸಭೆಯಲ್ಲಿ ಶೇ.3ರಷ್ಟು ತೆರಿಗೆ ಏರಿಕೆ ಮಾಡಿದ್ದನ್ನು ಅಲ್ಲಿನ ವಿರೋಧ ಪಕ್ಷ ಕಾಂಗ್ರೆಸ್ ಹಾಗೂ ಪಕ್ಷೇತರ ಸದಸ್ಯರುಗಳು ವಿರೋಧಿಸಿದ್ದರು. ಅಲ್ಲದೆ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ತೆರಿಗೆ ಏರಿಕೆಯನ್ನು ತಡೆ ಹಿಡಿಯಲಾಗಿದೆ. ಮಡಿಕೇರಿ ನಗರಸಭೆ ಕೂಡ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*